ಜೈಪುರ್: ಭಾರತ (India) ಮತ್ತು ಪಾಕಿಸ್ತಾನ (Pakistan) ಗಡಿಯಲ್ಲಿ 3 AK-47, 2 ಪಿಸ್ತೂಲ್ ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಪಂಜಾಬ್‌ನ (Punjab) ಪಠಾಣ್‌ಕೋಟ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನರೋತ್ ಜೈಮಲ್ ಸಿಂಗ್ ಗಡಿ ಪ್ರದೇಶದಲ್ಲಿ ಪಂಜಾಬ್‌ನ ಪಠಾಣ್‌ಕೋಟ್ ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಅಧಿಕಾರಿಗಳು ಶೋಧ ನಡೆಸಿದ್ದರು. ಈ ವೇಳೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಶಾಂತಿ ಕದಡಲು ಪಾಕಿಸ್ತಾನದಿಂದ ಈ ಶಸ್ತ್ರಾಸ್ತ್ರಗಳನ್ನು ಕಳುಹಿಸಲಾಗಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ 2 ವರ್ಷಗಳ ಹಿಂದೆ ಕಿಡ್ನ್ಯಾಪ್ ಆಗಿ ಗ್ಯಾಂಗ್ ರೇಪ್‌ಗೆ ಒಳಗಾಗಿದ್ದ ಕುಕಿ ಮಹಿಳೆ ಸಾವು
ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ 3 ಎಕೆ -47 ರೈಫಲ್‌ಗಳು, 5 ಮ್ಯಾಗಜೀನ್‌ಗಳು, ಟರ್ಕ್ ಮತ್ತು ಚೈನಾ ನಿರ್ಮಿತ 2 ಪಿಸ್ತೂಲ್‌ಗಳು, 98 ಸಜೀವ ಗುಂಡುಗಳು ಸೇರಿವೆ. ಗುಪ್ತಚರ ಮಾಹಿತಿಯ ಪ್ರಕಾರ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್ ಸರ್ವಿಸ್ ಇಂಟೆಲಿಜೆನ್ಸ್ (ಐಎಸ್‌ಐ) ಬೆಂಬಲದೊಂದಿಗೆ ಕೆಲಸ ಮಾಡುತ್ತಿರುವ ಉಗ್ರರು ಇವನ್ನು ಕಳಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಅಲ್ಲದೇ ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗುತ್ತಿರುವವರ ಬಂಧನಕ್ಕೆ ಮುಂದಾಗಿದ್ದಾರೆ.
ಉಗ್ರರ ಸಂಚನ್ನು ತಡೆಯಲು ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗ್ರೀನ್‌ಲ್ಯಾಂಡ್ ವಶಪಡಿಸಿಕೊಳ್ಳುವ ಪ್ಲ್ಯಾನ್‌ಗೆ ವಿರೋಧ – ಡೆನ್ಮಾರ್ಕ್, ಯುಕೆ, ಫ್ರಾನ್ಸ್ ಮೇಲೆ 10% ಸುಂಕ ವಿಧಿಸಿದ ಟ್ರಂಪ್

