ಚಂಡೀಗಢ: ಪಂಜಾಬ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಮೃತಸರ ಪೂರ್ವ ಕ್ಷೇತ್ರದಿಂದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ವಿರುದ್ಧ ಶಿರೋಮಣಿ ಅಕಾಲಿದಳ (ಎಸ್‍ಎಡಿ) ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಸ್ಪರ್ಧಿಸಲಿದ್ದಾರೆ.
ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು, ಬಿಕ್ರಮ್ ಸಿಂಗ್ ಮಜಿಥಿಯಾ ಅವರು ಸಿಧು ಅವರ ದುರಹಂಕಾರವನ್ನು ಅಡಗಿಸಲಿದ್ದಾರೆ ಎಂದು ಹೇಳಿದ್ದಾರೆ. ಸುಖಬೀರ್ ಸಿಂಗ್ ಬಾದಲ್ ಅವರು ಬಿಕ್ರಮ್ ಸಿಂಗ್ ಮಜಿಥಿಯಾ ಅವರ ಸೋದರ ಮಾವ ಆಗಿದ್ದಾರೆ. ಇದನ್ನೂ ಓದಿ: ನೈಟ್ ಕರ್ಫ್ಯೂ ನಡುವೆ ಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ
Bikram Singh Majithia will contest against Navjot Singh Sidhu to dismantle his arrogance in this Assembly elections: SAD chief Sukhbir Singh Badal
— ANI (@ANI) January 26, 2022
ಅಮೃತಸರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಖಬೀರ್ ಸಿಂಗ್ ಬಾದಲ್, ಸಿಧು ಅವರ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದನ್ನು ಮಜಿಥಿಯಾ ಖಚಿತಪಡಿಸಿಕೊಳ್ಳುತ್ತಾರೆ. ಎಸ್‍ಎಡಿ ಮುಖ್ಯಸ್ಥರು ಮುಂದಿನ ತಿಂಗಳ ಚುನಾವಣೆಯಲ್ಲಿ ಮಜಿತಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಮನೆಯ ಹೊರಗೆ ಎಸೆದ – ಆರೋಪಿ ಅರೆಸ್ಟ್
ಡ್ರಗ್ಸ್ ಪ್ರಕರಣದಲ್ಲಿ ಬಿಕ್ರಮ್ ಸಿಂಗ್ ಮಜಿಥಿಯಾ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇತ್ತೀಚೆಗಷ್ಟೇ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬಿಕ್ರಮ್ ಸಿಂಗ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರದ್ದುಗೊಳಿಸಿತ್ತು. ಆದರೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾರಣ ಮೂರು ದಿನಗಳ ಕಾಲ ರಕ್ಷಣೆ ನೀಡಲಾಗಿತ್ತು.