ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‍ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ‘ಬೊಗಳುವ ನಾಯಿ’ ಎಂದು ಹೇಳುವ ಮೂಲಕ ಪರೋಕ್ಷವಾಗಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಕ್ಬರುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ ಧ್ವನಿವರ್ಧಕಗಳ ಕುರಿತಂತೆ ಬಿಸಿ, ಬಿಸಿ ಚರ್ಚೆ ನಡೆಯುತ್ತಿದ್ದು, ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ನಿರ್ದಿಷ್ಟ ಡೆಸಿಬಲ್, ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನಿರ್ದಿಷ್ಟ ಮಿತಿಯ ಧ್ವನಿವರ್ಧಕಗಳನ್ನು ಬಳಸಲು ಸುಪ್ರೀಂಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಬಿಜೆಪಿ ವಿರುದ್ಧ ಹೋರಾಡಿ, ರಮ್ಯಾ ವಿರುದ್ಧ ಅಲ್ಲ – ಡಿಕೆಶಿ ಬೆಂಬಲಿಗರಿಗೆ ಮಹದೇವಪ್ಪ ಟಾಂಗ್
ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಗೆ ಅಕ್ಬರುದ್ದೀನ್ ಓವೈಸಿ ಅವರು ಭೇಟಿ ನೀಡಿದ್ದರು. ಈ ವೇಳೆ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಕ್ಬರುದ್ದೀನ್ ಓವೈಸಿ ಅವರು, ಸಿಂಹಗಳು ನಡೆದಾಡುವಾಗ ನಾಯಿ ಬೊಗಳುತ್ತದೆ ಎಂದು ರಾಜ್ ಠಾಕ್ರೆ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ನಾಯಿ ಬೊಗಳುತ್ತಿದ್ದರೆ, ಬೊಗಳಲಿ ಬಿಡಿ, ಬೊಗಳುವುದೇ ನಾಯಿಯ ಕೆಲಸ. ಆದರೆ ಸಿಂಹದ ನಡೆಯಲ್ಲಿ ಗಾಂಭೀರ್ಯ ಇರುತ್ತದೆ ಎಂದಿದ್ದಾರೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ