ಕಾರವಾರ: ಪುಲಕೇಶಿ ನಗರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸ್ ಮೂರ್ತಿ (Akhanda Srinivas Murthy) ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಭಾನುವಾರ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಈ ದೇಶದಲ್ಲಿ ಧೈರ್ಯವಾಗಿ ಮಾತನಾಡುವ ಮನುಷ್ಯ ರಾಹುಲ್ ಗಾಂಧಿ ಮಾತ್ರ – ಮಲ್ಲಿಕಾರ್ಜುನ ಖರ್ಗೆ
Advertisement
Advertisement
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್‌ನ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾಳೆ ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್ ಆಗಲ್ಲ: ಅರವಿಂದ ಬೆಲ್ಲದ್
Advertisement
Advertisement
ಅಕ್ಕಪಕ್ಕದ ಕ್ಷೇತ್ರದ ನಾಯಕರು ಹೇಳಿದರು ಅಂತಾ ನನಗೆ ಟಿಕೆಟ್ ತಪ್ಪಿಸಿದರು. ಕೆಜೆ ಹಳ್ಳಿ ಡಿಜೆಹಳ್ಳಿ ಗಲಾಟೆಯಾದ್ರೂ ನಾವೆಲ್ಲಾ ಅಣ್ಣತಮ್ಮಂದಿರಂತೆ ಇದ್ದೆವು. ಆದ್ರೆ ಬೆಂಕಿ ಹಚ್ಚಿ ಜೈಲಿಗೆ ಹೋಗಿಬಂದ ನಾಯಕರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ನನ್ನ ತಂದೆ 40 ವರ್ಷ ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಾಗಿದ್ದವರು. ಹಾಗಾಗಿ ಹಿರಿಯ ನಾಯಕರ ಮೇಲೆ ನನಗಿನ್ನೂ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.