Friday, 17th August 2018

Recent News

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

ಹಾಸನ: ಬೆಂಗಳೂರು ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕಾರು ಅಪಘಾತಕ್ಕಿಡಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಶ್ರೀನಿವಾಸಮೂರ್ತಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬೈಪಾಸ್ ರಸ್ತೆಯ ರಿಲಾಯನ್ಸ್ ಪೆಟ್ರೋಲ್ ಬಂಕ್ ಬಳಿ ಶಾಸಕರ ಇನ್ನೊವಾ ಕಾರು ಹಾಗೂ ಸ್ವಿಫ್ಟ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಘಾತಕ್ಕೀಡಾದ ಕಾರನ್ನು ಸ್ಥಳದಲ್ಲೇ ಬಿಟ್ಟು ಬೇರೊಂದು ಕಾರಿನಲ್ಲಿ ಶಾಸಕರು ಬೆಂಗಳೂರಿನತ್ತ ತೆರಳಿದ್ದಾರೆ.

ಸ್ವಿಫ್ಟ್ ಕಾರಿನ ಚಾಲಕ ಒವರ್ ಟೇಕ್ ಮಾಡಿ ಎಡಗಡೆಗೆ ತಿರುಗಿದಾಗ ಹಿಂಬದಿಯಿಂದ ಶಾಸಕರ ಕಾರು ಡಿಕ್ಕಿಯಾಗಿದೆ. ಈ ಕುರಿತು ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಶಾಸಕರು, ತಮಗೇ ಯಾವುದೇ ಸಮಸ್ಯೆ ಆಗಿಲ್ಲ. ಕ್ಷೇಮವಾಗಿದ್ದೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *