ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್ ಟಿಕೆಟ್‌ಗಾಗಿ ದೇಗುಲ, ಮಸೀದಿಯಲ್ಲಿ ವಿಶೇಷ ಪೂಜೆ

Public TV
1 Min Read
akhanda srinivas murthy fans

ಬೆಂಗಳೂರು: ಕಾಂಗ್ರೆಸ್‌ನ (Congress) ಮೂರನೇ ಪಟ್ಟಿಯಲ್ಲಿ ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ (Akhanda Srinivas Murthy) ಅವರ ಹೆಸರು ಬರಲಿ ಹಾಗೂ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ದೇಗುಲ ಮತ್ತು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪುಲಕೇಶಿನಗರದಲ್ಲಿನ ತಂಗಬೆಟ್ಟ ಸುಬ್ರಮಣ್ಯ ದೇಗುಲ ಹಾಗೂ ಮಸೀದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು, ಟಿಕೆಟ್‌ಗಾಗಿ ಪೂಜೆ, ಪುನಸ್ಕಾರ ಮಾಡಿದರು. ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ಶಾಸಕ ಡಾ.ಶಿವರಾಜ್ ಪಾಟೀಲ್ ವಿರುದ್ಧ ಜೆಡಿಎಸ್ ದೂರು

akhanda srinivas murthy fans1

ಕಾಂಗ್ರೆಸ್ ಹೈಕಮಾಂಡ್ ಬಳಿ ತೆರಳಿ ಅವರಲ್ಲಿ ಟಿಕೆಟ್‌ಗಾಗಿ ಮನವಿ ಮಾಡಲು ಸಾಧ್ಯವಿಲ್ಲ. ಆದ್ದರಿಂದ ದೇವರ ಮೊರೆ ಹೋಗಿದ್ದೇವೆ. ಇಲ್ಲಿಯ ಪೂಜೆಯಿಂದ ಹೈಕಮಾಂಡ್ ಅಖಂಡ ಶ್ರೀನಿವಾಸ ಮೂರ್ತಿಯವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಿ ಎಂದು ಪ್ರಾರ್ಥಿಸಿದರು.

ಕಳೆದ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಅತೀ ಹೆಚ್ಚು ಅಂದರೆ, 81 ಸಾವಿರ ಮತಗಳಿಂದ ಅಮೋಘ ಗೆಲುವು ಸಾಧಿಸಿರುವ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಲು ವಿಳಂಬವಾಗುತ್ತಿರುವುದಕ್ಕೆ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಗುಜರಾತ್ ನಾಯಕರನ್ನು ಮೆಚ್ಚಿಸಲು KMF ಮುಗಿಸುವ ಹುನ್ನಾರ: ಹೆಚ್ಡಿಕೆ ವಾಗ್ದಾಳಿ

ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಿದ್ದೇ ಆದ್ದಲ್ಲಿ ಅವರನ್ನು ಕಳೆದ ಬಾರಿಗಿಂತ ಇನ್ನೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವಂತೆ ಮಾಡಲಾಗುವುದು ಎಂದು ಬೆಂಬಲಿಗರು ಭರವಸೆ ನೀಡಿದ್ದಾರೆ. ಹಾಗೆಯೇ ಅಖಂಡ ಶ್ರೀನಿವಾಸ ಮೂರ್ತಿ ಅವರ ಪರ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿದರು.

Share This Article