ಟಾಲಿವುಡ್ ಚಿತ್ರರಂಗದ ಭರವಸೆ ನಾಯಕ ಅಖಿಲ್ ಅಕ್ಕಿನೇನಿ ಏಜೆಂಟ್ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಲು ಸಜ್ಜಾಗಿದ್ದಾರೆ. ಸುರೇಂದ್ರ ರೆಡ್ಡಿ ನಿರ್ದೇಶನದಲ್ಲಿ ತಯಾರಾಗ್ತಿರುವ ಈ ಸಿನಿಮಾದ ಟೀಸರ್ ಇದೇ 15ಕ್ಕೆ ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗ್ತಿದೆ.
Advertisement
ಹೈ ಬಜೆಟ್ ಸಿನಿಮಾವಾಗಿರುವ ಏಜೆಂಟ್ ಸ್ಪೈ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಈ ಚಿತ್ರಕ್ಕಾಗಿ ಅಖಿಲ್ ಬೇಜಾನ್ ಕಸರತ್ತು ನಡೆಸಿ ಬಾಡಿ ಟ್ರಾನ್ಸ್ ಫಾರ್ಮೆಷನ್ ಮಾಡಿಕೊಂಡಿದ್ದಾರೆ. ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಏಜೆಂಟ್ ಚಿತ್ರದಲ್ಲಿ ಸಾಕ್ಷಿ ವೈದ್ಯಗೆ ಅಖಿಲ್ ಗೆ ಜೋಡಿಯಾಗಿ ನಟಿಸಿದ್ದಾರೆ. ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್ ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ:`ಹೊಯ್ಸಳ’ ಡಾಲಿಗೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಸಾಥ್
Advertisement
Advertisement
ಸೆನ್ಸೇಷನಲ್ ಮ್ಯೂಸಿಕ್ ಕಂಪೋಸರ್ ಹಿಪ್ ಹಾಪ್ ತಮಿಝಾ ಸಂಗೀತ, ರಸೂಲ್ ಎಲ್ಲೂರು ಕ್ಯಾಮೆರಾ, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ್ ಕೊಲ್ಲಾ ಕಲಾ ನಿರ್ದೇಶನ ಚಿತ್ರಕ್ಕಿದ್ದು, ಅಜಯ್ ಸುಂಕರ, ಪತಿ ದೀಪಾ ರೆಡ್ಡಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈಗಾಗ್ಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ, ಇದೇ ತಿಂಗಳ 15ಕ್ಕೆ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರಕ್ಕೆ ಮುನ್ನುಡಿ ಬರೆಯುತ್ತಿದೆ.