ಲಕ್ನೋ: ಗೃಹ ಬಳಕೆಯ ಅಡುಗೆ ಅನಿಲ ಹಾಗೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿರುವ ಕ್ರಮವನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಪಂಚ ರಾಜ್ಯಗಳಲ್ಲಿ ಚುನಾವಣೆ ಮುಕ್ತಾಯವಾದ ನಂತರ, ಆಡಳಿತಾರೂಢ ಬಿಜೆಪಿ ಸರ್ಕಾರದಿಂದ ಜನರಿಗೆ ಹಣದುಬ್ಬರದ ಮತ್ತೊಂದು ಉಡುಗೊರೆಯಾಗಿದೆ. ಲಕ್ನೋದಲ್ಲಿ ಎಲ್‍ಪಿಜಿ ಸಿಲಿಂಡರ್ ಸಾವಿರದ ಹತ್ತಿರ ಮತ್ತು ಪಾಟ್ನಾದಲ್ಲಿ ಸಾವಿರಕ್ಕೂ ಹೆಚ್ಚಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
जनता को दिया भाजपा सरकार ने महंगाई का एक और उपहार… लखनऊ में रसोई गैस सिलेंडर हुआ हज़ार के पास और पटना में हज़ार के पार!
चुनाव ख़त्म, महंगाई शुरू… pic.twitter.com/JUROJtgwTr
— Akhilesh Yadav (@yadavakhilesh) March 22, 2022
137 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬಾರಿ ಏರಿಕೆ ಕಂಡಿದೆ. ಮಾರ್ಚ್ 22ರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ. ಬೆಲೆ ಏರಿಕೆಯಿಂದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್‍ಗೆ 101.42 ಮತ್ತು ಡೀಸೆಲ್‍ಗೆ 85.80 ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.21, ಪ್ರತಿ ಲೀಟರ್ ಡೀಸೆಲ್‍ಗೆ 87.47, ಮುಂಬೈನಲ್ಲಿ ಲೀಟರ್ ಪೆಟ್ರೋಲ್ 110.78, ಡೀಸೆಲ್ 94.94, ಕೋಲ್ಕತ್ತಾದಲ್ಲಿ ಪೆಟ್ರೋಲ್ 102.16 ಮತ್ತು ಡೀಸೆಲ್ 90.62, ಚೆನ್ನೈನಲ್ಲಿ ಪೆಟ್ರೋಲ್ ದರ 102.16, ಡೀಸೆಲ್ ದರ 92.19 ರೂಪಾಯಿಗೆ ಏರಿಕೆಯಾಗಿದೆ. ಇದನ್ನೂ ಓದಿ: ಚುನಾವಣೆವರೆಗೆ ಸುಮ್ಮನಿದ್ದು, ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ: ಡಿಕೆಶಿ
Advertisement
Advertisement
ನವೆಂಬರ್ 2ರಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರಲಿಲ್ಲ. ಪಂಚ ರಾಜ್ಯಗಳ ಚುನಾವಣೆ ಬಳಿಕ ದರ ಏರಿಕೆಯ ನಿರೀಕ್ಷೆ ಇತ್ತು. ಕಳೆದ ವರ್ಷ ನವೆಂಬರ್‍ನಿಂದ ಈವರೆಗೂ ಕಚ್ಚಾ ತೈಲ ದರದಲ್ಲಿ ಶೇ. 25ರಷ್ಟು ಏರಿಕೆಯಾಗಿದೆ. ರಷ್ಯಾ, ಉಕ್ರೇನ್ ನಡುವಿನ ಸಂಘರ್ಷದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಬಾರಿ ಏರಿಕೆ ಕಂಡಿದ್ದು ಈಗ ಭಾರತದ ಮೇಲೂ ಪರಿಣಾಮ ಬಿದ್ದಿದೆ. ಇದನ್ನೂ ಓದಿ: ಇದೆ ಮೊದಲ ಬಾರಿ ಬಿಡಿಎ ಬ್ರೋಕರ್‌ಗಳ ಮನೆ ಮೇಲೆ ಎಸಿಬಿ ದಾಳಿ
Advertisement
ಉತ್ತರ ಪ್ರದೇಶ ಮತ್ತು ಪಂಜಾಬ್ ಸೇರಿದಂತೆ ಐದು ರಾಜ್ಯಗಳಲ್ಲಿ ಚುನಾವಣೆ ನಿಗದಿಯಾದ ಹಿನ್ನೆಲೆ ಕಳೆದ ವರ್ಷ ನವೆಂಬರ್ 4ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆಯಾಗಿಲ್ಲ. ಅಕ್ಟೋಬರ್ 6ರ ಬಳಿಕ ಗೃಹ ಬಳಕೆ ಎಲ್‍ಪಿಜಿ ದರಗಳಲ್ಲಿ ಪರಿಷ್ಕರಣೆ ಆಗಿರಲಿಲ್ಲ. ಅದಕ್ಕೂ ಮುನ್ನ 2021ರ ಜುಲೈನಿಂದ ಅಕ್ಟೋಬರ್ ನಡುವೆ ಪ್ರತಿ ಸಿಲಿಂಡರ್ ಬೆಲೆ 100ರವರೆಗೂ ಹೆಚ್ಚಳವಾಗಿತ್ತು. ಇದನ್ನೂ ಓದಿ: ಬ್ರೋಕರ್ ಮೋಹನ್ ಮನೆಯಲ್ಲಿತ್ತು 5 ಕೆಜಿ ಚಿನ್ನ – ಎಸಿಬಿ ಅಧಿಕಾರಿಗಳೇ ಶಾಕ್