ಲಕ್ನೋ: ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ, ಯುಪಿಯಲ್ಲಿ 300ಕ್ಕಿಂತ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹೇಳಿದ್ದಾರೆ.
ಎಸ್‍ಪಿ ನೇತೃತ್ವದ ಮೈತ್ರಿಕೂಟವು ಉತ್ತರ ಪ್ರದೇಶದಲ್ಲಿ 300 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮುಂದಿನ ಸರ್ಕಾರವನ್ನು ರಚಿಸಲಿದೆ. ಪ್ರಚಾರದ ಸಮಯದಲ್ಲಿ ಸುಳ್ಳು ಮತ್ತು ನಕಲಿ ಡೇಟಾವನ್ನು ಪ್ರಸ್ತುತಪಡಿಸಿದ್ದಕ್ಕಾಗಿ ಆಡಳಿತಾರೂಢ ಬಿಜೆಪಿಯನ್ನು ಜನರು ಅರಿತುಕೊಂಡಿದ್ದಾರೆ. ಜನರು ಇದೀಗ ತಮ್ಮ ಭವಿಷ್ಯಕ್ಕಾಗಿ ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಮತ್ತು ಬೆಳವಣಿಗೆಗೆ ಮತ ಹಾಕಿದ್ದಾರೆ ಎಂದು ಹೇಳಿದರು. ಚುನಾವಣೆಯುದ್ದಕ್ಕೂ ಪರಿವಾರ್ ವಾದ್ (ವಂಶಾಡಳಿತ) ಮೇಲೆ ಬಿಜೆಪಿ ದಾಳಿ ನಡೆಸಿರುವುದಕ್ಕೆ ಪ್ರತಿಕ್ರಿಯಿಸಿದ ಅಖಿಲೇಶ್ ಅತೀ ಹೆಚ್ಚು ವಂಶಾಡಳಿತ ಬಿಜೆಪಿಯಲ್ಲೇ ಕಂಡುಬಂದಿದೆ ಎಂದಿದ್ದಾರೆ. ಪಂಚರಾಜ್ಯ ಚುನಾವಣೆ Exit Pollನಲ್ಲಿ ಯಾರು ಮೇಲುಗೈ..?
Advertisement
Advertisement
ಏಳನೇ ಮತ್ತು ಅಂತಿಮ ಹಂತದ ಮತದಾನದ ನಂತರ ಬಿಜೆಪಿ ರಾಜ್ಯದಿಂದ ನಿರ್ನಾಮವಾಗಲಿದೆ. ಸಮಾಜವಾದಿ ಪಕ್ಷ ಮೈತ್ರಿಕೂಟವು ಮಾರ್ಚ್ 10 ರ ನಂತರ 300 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಬಹುಮತದ ಸರ್ಕಾರವನ್ನು ರಚಿಸುತ್ತಿದೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದೆ ಎಂದು ತೋರಿಸುವ ಚುನಾವಣೋತ್ತರ ಸಮೀಕ್ಷೆಗಳನ್ನು ತಳ್ಳಿಹಾಕಿದ್ಧಾರೆ. ಇದನ್ನೂ ಓದಿ: ಚುನಾವಣೋತ್ತರ ಸಮೀಕ್ಷೆ- ಉತ್ತರ ಪ್ರದೇಶದಲ್ಲಿ ಬಿಜೆಪಿ ಮೇಲುಗೈ
Advertisement
Advertisement
ಮಾರ್ಚ್ 10 ರಂದು ಪಂಜಾಬ್, ಉತ್ತರಾಖಂಡ್, ಗೋವಾ ಮತ್ತು ಮಣಿಪುರದ ಫಲಿತಾಂಶಗಳೊಂದಿಗೆ ಉತ್ತರಪ್ರದೇಶ ಚುನಾವಣೆಯ ಫಲಿತಾಂಶಗಳು ಪ್ರಕಟವಾಗಲಿದೆ. ನಾವು ತರಬೇತಿ ಶಿಬಿರಗಳನ್ನು ನಡೆಸಿದ್ದೇವೆ, ರಥಯಾತ್ರೆಗಳನ್ನು ನಡೆಸಿದ್ದೇವೆ, ಅದಕ್ಕೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿತು. ಇದು ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿತು, ಅವರು ವಿಜಯವನ್ನು ಖಚಿತಪಡಿಸಿಕೊಳ್ಳಲು ಪೂರ್ಣ ಹೃದಯದಿಂದ ಕೆಲಸ ಮಾಡಿದರು. ಇದು ಮತದಾರರ ಗೆಲುವಾಗಲಿದೆ ಎಂದು ಅಖಿಲೇಶ್ ಹೇಳಿದ್ದಾರೆ.