ನವದೆಹಲಿ: ಅಕ್ರಮ ಗಣಿಗಾರಿಕೆ (Illegal Mining Case) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶ (Uttar Pradesh) ಸಿಎಂ ಅಖಿಲೇಶ್ ಯಾದವ್ (Akhilesh Yadav) ಅವರಿಗೆ ಸಮನ್ಸ್ ಜಾರಿ ಮಾಡಿದೆ.
ದೆಹಲಿಗೆ ಗುರುವಾರ ಆಗಮಿಸಿ ವಿಚಾರಣೆಗೆ ಹಾಜರಾಗಬೇಕೆಂದು ಅಖಿಲೇಶ್‌ಗೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್?
Advertisement
2012-2016ರ ಅವಧಿಯಲ್ಲಿ ಹಮೀರ್‌ಪುರ್‌ನಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಅಖಿಲೇಶ್‌ಗೆ ಸೂಚಿಸಲಾಗಿದೆ.
Advertisement
Advertisement
ಬುಧವಾರ ಪ್ರತಿಕ್ರಿಯಿಸಿದ ಅಖಿಲೇಶ್ ಯಾದವ್, INDIA ಒಕ್ಕೂಟ ಬಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ಒಡೆಯಲು ಬಿಜೆಪಿ ಮುಂದಾಗುತ್ತಿದೆ. ಈ ಕಾರಣಕ್ಕೆ ಬೇರೆ ಪಕ್ಷದ ನಾಯಕರನ್ನು ಸೆಳೆದು ಅಡ್ಡ ಮತದಾನಕ್ಕೆ ಮುಂದಾಗಿದೆ ಎಂದು ಆರೋಪಿಸಿದರು.
Advertisement
ಉತ್ತರ ಪ್ರದೇಶದ 10 ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ 8, ಎಸ್‌ಪಿ 2 ಸ್ಥಾನಗಳನ್ನು ಗೆದ್ದುಕೊಂಡಿದೆ. ಎಸ್‌ಪಿಯ 7 ಶಾಸಕರು ಅಡ್ಡ ಮತದಾನ ಮಾಡಿದ ಪರಿಣಾಮ ಬಿಜೆಪಿಯ 8ನೇ ಅಭ್ಯರ್ಥಿ ಆರ್‌ಎಸ್ ಸಂಜಯ್ ಸೇಥ್ ಜಯಗಳಿಸಿದರು.