ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಲಿದ್ದಾರೆ.
ಪಕ್ಷದ 111 ಶಾಸಕರು ಅಖಿಲೇಶ್ ಯಾದವ್ ಅವರನ್ನು ಸಮಾಜವಾದಿ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಯುಪಿಯಲ್ಲಿ ಪಡಿತರ ಯೋಜನೆ ವಿಸ್ತರಣೆ- 2ನೇ ಅವಧಿಯಲ್ಲಿ ಯೋಗಿ ಸರ್ಕಾರದ ಮೊದಲ ನಿರ್ಧಾರ
Advertisement
Advertisement
ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ಪ್ರಸ್ತಾಪಿಸಬಹುದಾದ ವಿಷಯಗಳ ಕುರಿತು ಚರ್ಚಿಸಲು ಯಾದವ್ ಅವರು ಸಮಾಜವಾದಿ ಪಕ್ಷದ ಮಿತ್ರಪಕ್ಷಗಳ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.
Advertisement
ಮೊದಲ ಬಾರಿಗೆ ಯಾದವ್, ಯುಪಿಯ ಮೈನ್‌ಪುರಿ ಜಿಲ್ಲೆಯ ಕುಟುಂಬದ ಭದ್ರಕೋಟೆಯಾದ ಕರ್ಹಾಲ್‌ನಿಂದ ಶಾಸಕರಾಗಿ ಆಯ್ಕೆಯಾದ ನಂತರ ಅಜಮ್‌ಗಢ್ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಭಾರತದ ರಾಜಕೀಯದಲ್ಲಿ ಮಹತ್ವದ ಸ್ಥಾನ ಪಡೆದಿರುವ ಯುಪಿಯಲ್ಲಿ 2027 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸದನದಲ್ಲಿ ಬಿಜೆಪಿಯನ್ನು ಎದುರಿಸಲು ಮಾಜಿ ಮುಖ್ಯಮಂತ್ರಿ ಉದ್ದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 8 ಬಾರಿ ಶಾಸಕ, ಸತೀಶ್ ಮಹಾನ್ ಮುಂದಿನ ಯುಪಿ ಸ್ಪೀಕರ್?
Advertisement
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಾದವ್ ಬಿಜೆಪಿಗೆ ಪ್ರಮುಖ ಸವಾಲಾಗಿದ್ದರು. ಅವರ ಪಕ್ಷವು 403 ಸದಸ್ಯ ಸ್ಥಾನಗಳಲ್ಲಿ 111 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಸ್ಥಾನವನ್ನು ಗಳಿಸಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಸಮಾಜವಾದಿ ಪಕ್ಷ ಉತ್ತಮ ಸಾಧನೆ ಮಾಡಿದೆ.