ಲಕ್ನೋ: ವಾರಣಾಸಿಯಲ್ಲಿ ಇವಿಎಂ ದುರ್ಬಳಕೆಯಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಕ್ಕೆ ಸಂಬಂಧಿಸಿದಂತೆ, ಚುನಾವಣಾ ಆಯೋಗಕ್ಕೆ ಸಮಾಜವಾದಿ ಪಕ್ಷ ಪತ್ರವೊಂದನ್ನು ಬರೆದಿದೆ.
ಎಲ್ಲಾ ಕ್ಷೇತ್ರಗಳಿಗೆ ಮತ ಎಣಿಕೆ ಪ್ರಕ್ರಿಯೆಯನ್ನು ವೆಬ್‌ಕಾಸ್ಟಿಂಗ್ ಮಾಡಬೇಕು. ಅದಕ್ಕೆ ಸಂಬಂಧಿಸಿದ ಲಿಂಕ್ ಅನ್ನು ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತರು, ಮತಗಟ್ಟೆ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಬೇಕು ಎಂದು ಎಸ್‌ಪಿ ಒತ್ತಾಯಿಸಿದೆ. ಇದನ್ನೂ ಓದಿ: EVM ಪ್ರೋಟೋಕಾಲ್‍ನಲ್ಲಿ ಲೋಪ: ಚುನಾವಣಾಧಿಕಾರಿಯ ವೀಡಿಯೋ ಹಂಚಿಕೊಂಡ ಎಸ್‍ಪಿ
ಇದರಿಂದ ರಾಜಕೀಯ ಪಕ್ಷಗಳು ಎಣಿಕೆ ಪ್ರಕ್ರಿಯೆಯನ್ನು ಲೈವ್ ವೀಕ್ಷಿಸಬಹುದು. ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ಸ್ವತಂತ್ರವಾಗಿ ನಡೆಸಬಹುದು ಎಂದು ಮನವಿಯಲ್ಲಿ ಉಲ್ಲೇಖಿಸಿದೆ.
ವಾರಣಾಸಿಯ ಮತಗಟ್ಟೆಯಿಂದ ಇವಿಎಂಗಳನ್ನು ಸಾಗಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿತ್ತು. ಸ್ಥಳೀಯ ಅಭ್ಯರ್ಥಿಗಳ ಗಮನಕ್ಕೂ ತಾರದೇ ಇವಿಎಂಗಳನ್ನು ಅಧಿಕಾರಿಗಳು ಸಾಗಾಟ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ವಾರಣಾಸಿಯಲ್ಲಿ EVM ಕಳವು: ಅಖಿಲೇಶ್ ಯಾದವ್ ಗಂಭೀರ ಆರೋಪ
ಸಮಾಜವಾದಿ ಪಕ್ಷ ಅಯೋಧ್ಯೆಯಲ್ಲಿ ಜಯಗಳಿಸಲಿದೆ. ಹೀಗಾಗಿ ಭಯದಿಂದ ಬಿಜೆಪಿ ಈ ರೀತಿಯ ಕೆಲಸ ಮಾಡಿಸುತ್ತಿದೆ ಎಂದು ಯಾದವ್ ಆರೋಪಿಸಿದ್ದರು. ಆದರೆ ಈ ಆರೋಪವನ್ನು ಬಿಜೆಪಿ ತಳ್ಳಿಹಾಕಿದೆ. ಇದನ್ನೂ ಓದಿ: ಬಾಂಗ್ಲಾ ವಿದ್ಯಾರ್ಥಿಗಳ ರಕ್ಷಣೆ – ಮೋದಿಗೆ ಧನ್ಯವಾದ ತಿಳಿಸಿದ ಹಸೀನಾ