Connect with us

Districts

ಅಕ್ಕಮಹಾದೇವಿ ಮಹಿಳಾ ನೂತನ ಕುಲಪತಿಯಾಗಿ ಪ್ರೊ. ಬಿ.ಕೆ.ತುಳಸಿಮಾಲಾ ನೇಮಕ

Published

on

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಸರ್ಕಾರ ಪ್ರೊ. ಬಿ.ಕೆ.ತುಳಸಿಮಾಲಾ ಅವರನ್ನು ಕುಲಪತಿ ಹುದ್ದೆಗೆ ಆಯ್ಕೆ ಮಾಡಿದೆ.

ಪ್ರೊ. ಬಿ.ಕೆ.ತುಳಸಿಮಾಲಾ ಅವರನ್ನು ನೇಮಕ ಮಾಡಿ ರಾಜ್ಯಪಾಲ ವಜು ಬಾಯಿ ವಾಲಾ ಇಂದು ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಪ್ರೊ.ತುಳಸಿಮಾಲಾ ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಕರ್ತವ್ಯ ಸಿರ್ವಹಿಸಿದ್ದರು.

ಪ್ರಸ್ತುತ ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾನಿಲಯದ ಕುಲಸಚಿವರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಇದೀಗ 4 ವರ್ಷಗಳ ಕಾಲ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಯನ್ನಾಗಿ ಪ್ರೊ.ತುಳಸಿಮಾಲಾ ಸರ್ಕಾರದಿಂದ ಆಯ್ಕೆಯಾಗಿದ್ದಾರೆ

Click to comment

Leave a Reply

Your email address will not be published. Required fields are marked *