ಚಿಕ್ಕಮಗಳೂರು: ಜಿಲ್ಲೆಯ ಬೀರೂರಿನ ಅಕ್ಕಮಹಾದೇವಿ ಮಹಿಳಾ ಸಮಾಜದ (Akkamahadevi Mahila Samaja) ಅಮೃತ ಮಹೋತ್ಸವಕ್ಕೆ ಇಂದು (ಶುಕ್ರವಾರ) ಅದ್ಧೂರಿ ಚಾಲನೆ ಸಿಕ್ಕಿದೆ. ಅಕ್ಕಮಹಾದೇವಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ 75ನೇ ವರ್ಷದ ಮಹೋತ್ಸವ ಸಮಾರಂಭ ನಡೆಯುತ್ತಿದೆ.
ಇಂದು ಬೀರೂರಿನ (Birur) ಅಕ್ಕಮಹಾದೇವಿ ಮಹಿಳಾ ಸಮಾಜದ ಹಿರಿಯ ಸದಸ್ಯೆ ಎಂ.ವಿ.ನಾಗರತ್ನಮ್ಮ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಬೆಳಗ್ಗೆ 10 ಗಂಟೆಗೆ ಶರಣ ಶರಣೆಯರ ಸ್ತಬ್ದಚಿತ್ರ ಮೆರವಣಿಗೆ ನಡೆಸಲಾಯಿತು. ಇದನ್ನೂ ಓದಿ: ಗೋಧ್ರಾ ಮಾದರಿಯಲ್ಲಿ ರೈಲು ಸುಟ್ಟು ಹಾಕುವುದಾಗಿ ಬೆದರಿಕೆ: ಸಮಗ್ರ ತನಿಖೆಗೆ ಸಿ.ಟಿ.ರವಿ ಆಗ್ರಹ
Advertisement
Advertisement
ಶನಿವಾರ (ಫೆ.24) ಸಂಜೆ 6 ಗಂಟೆಗೆ ಬೀರೂರಿನ ಶಾಲಾ ಸಲಹಾ ಸಮಿತಿ ಅಧ್ಯಕ್ಷರಾದ ವಿಶಾಲಾ ಷಡಾಕ್ಷರಪ್ಪ ಅವರು 75ನೇ ವರ್ಷದ ಮಹೋತ್ಸವದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಮೃತ ಮಹೋತ್ಸವದಲ್ಲಿ ಅಕ್ಕಮಹಾದೇವಿ ಮಹಿಳಾ ಸಮಾಜದ ಅಧ್ಯಕ್ಷೆ ಶೈಲಜಾ ಸದಾಶಿವನ್, ಕಾರ್ಯದರ್ಶಿ ಕೋಡಿಹಳ್ಳಿ ಉಷಾಸ್ವಾಮಿ, ಖಜಾಂಚಿ ಕಲ್ಪನ ಡಿ.ಪತ್ರೆ, ದಾವಣಗೆರೆಯ ಕದಳಿ ವೇದಿಕೆ ಜಿಲ್ಲಾಧ್ಯಕ್ಷೆ ಗಾಯತ್ರಿ ವಸ್ತ್ರದ್ ಇತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
Advertisement
Advertisement
ಬೀರೂರಿನ ಹಿರಿಯ ವಕೀಲರು ಮತ್ತು ನೋಟರಿ ಎಂ.ಹೆಚ್.ನಿರ್ಮಲಾ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ಅಕ್ಕಮಹಾದೇವಿ ಮಹಿಳಾ ಸಮಾಜದ ಸದಸ್ಯೆ ಆಶಾ ಶಶಿಧರ್ ಅವರಿಂದ ಬಹುಮಾನ ವಿತರಣೆ ಕಾರ್ಯಕ್ರಮ ಇರಲಿದೆ. ಇದೇ ವೇಳೆ ‘ಶರಣ ಸಂಸ್ಕೃತಿ ಸಂಗಮ’ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ಜರುಗಲಿದೆ. ಇದನ್ನೂ ಓದಿ: ಅಯೋಧ್ಯೆ ಯಾತ್ರಿಕರ ರೈಲು ಗಲಾಟೆ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಫಲ: ಪ್ರಹ್ಲಾದ್ ಜೋಶಿ