`ಓ ಮೈ ಲವ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾದ ಅಕ್ಷಿತ್ ಶಶಿಕುಮಾರ್‌ಗೆ ಇದೀಗ ಮತ್ತೊಂದು ಹೊಸ ಪ್ರಾಜೆಕ್ಟ್ ಮೂಲಕ ಗಾಂಧಿನಗರದಲ್ಲಿ ಸೌಂಡ್ ಮಾಡ್ತಿದ್ದಾರೆ.
Advertisement
ತಮ್ಮ ಮೊದಲ ಸಿನಿಮಾದಲ್ಲೇ ಭರವಸೆಯ ನಟನಾಗಿ ಹೊರಹೊಮ್ಮಿದ ಅಕ್ಷಿತ್ ಇದೀಗ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ವೃತ್ತಿ ವೈದ್ಯರಾಗಿರುವ ಜಿ ವೆಂಕಟೇಶ್ ಪ್ರಸಾದ್ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ಅಕ್ಷಿತ್ ನಾಯಕನಾಗಿದ್ದು, ಮಿಲ್ಕಿ ಬ್ಯೂಟಿ ಅದಿತಿ ಪ್ರಭುದೇವ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
Advertisement
Advertisement
ಇದೊಂದು ಸಸ್ಪೆನ್ಸ್ ಆ್ಯಕ್ಷನ್ ಥ್ರಿಲರ್ ಕಥೆಯಾಗಿದ್ದು, ಕಥೆಯು ವೈದ್ಯಕೀಯ ಕ್ಯಾಂಪಸ್ ಸುತ್ತಮುತ್ತ ನಡೆಯುವ ಕಥೆಯಾಗಿದೆ. ಸಿನಿಮಾಗೆ `Chaos’ ಎಂಬ ಟೈಟಲ್ ಇಡಲಾಗಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದ್ದು. ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಈಗೀಗ ಚೈತ್ರಾ ಹಳ್ಳಿಕೇರಿ ಮುಖವಾಡ ಕಳಚ್ತಾ ಇದ್ದಾರೆ : ಸ್ಪೂರ್ತಿ ಗೌಡ
Advertisement
ಇದೇ ಮೊದಲ ಅಕ್ಷಿತ್ ಮತ್ತು ಅದಿತಿ ಪ್ರಭುದೇವಾ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಕ್ಷಿತ್ ತಂದೆ ಸುಪ್ರಿಮ್ ಹಿರೋ ಶಶಿಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಕ್ಟೋಬರ್‌ನಲ್ಲಿ ಚಿತ್ರ ತೆರೆಗೆ ಅಪ್ಪಳಿಸಲಿದೆ.