Bengaluru City

ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

Published

on

Share this

ಬೆಂಗಳೂರು: ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ರೈತರು ಒತ್ತಾಯ ಮಾಡಿದ್ದಾರೆ. ಈ ವಿಚಾರವಾಗಿ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ.

ಯುಕೆಪಿ 3ನೇ ಹಂತದಲ್ಲಿ ಮುಳುಗಡೆಯಾಗುವ ಬಬಲೇಶ್ವರ ತಾಲೂಕಿನ ಎಲ್ಲಾ ಜಮೀನುಗಳಿಗೆ ಏಕರೂಪ ಪರಿಹಾರ ಒದಗಿಸಲು ಕೋರಿ ರೈತರ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿತು. ಈ ವೇಳೆ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದು, ನಮ್ಮ ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ ಎಂದು ರಾಜ್ಯ ಬಾರ್ ಕೌನ್ಸಿಲ್ ಅಧ್ಯಕ್ಷ ರಾಜೇಂದ್ರ ದೇಸಾಯಿ ತಿಳಿಸಿದ್ದಾರೆ. ಇದನ್ನೂ ಓದಿ:  5 ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ, 8 ನ್ಯಾಯಮೂರ್ತಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು

ಆಲಮಟ್ಟಿ ಆಣೆಕಟ್ಟು 524.256ಮೀ ಎತ್ತರಿಸಿ, ನೀರು ನಿಲ್ಲಿಸಿದಾಗ ಅಂದಾಜು 75 ಸಾವಿರ ಎಕರೆ ಪ್ರದೇಶದಷ್ಟು ಜಮೀನು ಮುಳುಗಡೆಯಾಗಲಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳು ಮುಳುಗಡೆಯಾಗಲಿವೆ. ಈ ಹಿಂದೆ 2015-16ರಲ್ಲಿ ಮಾರ್ಗಸೂಚಿ ಬೆಲೆಯನ್ನು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಗ್ರಾಮಗಳಿಗೆ ನಿಗದಿಪಡಿಸಿರುತ್ತಾರೆ. ಆದರೆ ಬಾಗಲಕೋಟೆಯ ಜಮಖಂಡಿ ಮತ್ತು ಬೀಳಗಿ ತಾಲೂಕಿನ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿರುತ್ತಾರೆ. ಅದರಂತೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳ ಜಮೀನುಗಳ ಮಾರ್ಗಸೂಚಿ ಪರಿಷ್ಕರಣೆ ಮಾಡಿ ಎಲ್ಲಾ ರೈತರಿಗೆ ನ್ಯಾಯ ದೊರಕಿಸಲು ಕೋರಿ ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಅವರ ನೇತೃತದಲ್ಲಿ ಮುಖ್ಯಮಂತ್ರಿಗಳನ್ನು ಇಂದು ಭೇಟಿ ಮಾಡಿದ್ದಾಗ ಅವರಿಂದ ಸಕಾರಾತ್ಮಕ ಭರವಸೆ ದೊರೆತಿದೆ ಎಂದರು. ಇದನ್ನೂ ಓದಿ:  ಮಕ್ಕಳ ನಿರ್ಲಕ್ಷ್ಯ- ಬೇಸತ್ತ ವೃದ್ಧ ತಂದೆ, ತಾಯಿ ಆತ್ಮಹತ್ಯೆ

ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ್ ಅವರು ರೈತರ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಉಪಸ್ಥಿತರಿದ್ದು, ರೈತರ ಮನವಿಯನ್ನು ಆಲಿಸಿದರು.

ಈ ಸಂದರ್ಭದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ್, ಉಪಾಧ್ಯಕ್ಷ ಎಚ್.ಆರ್.ಬಿರಾದಾರ, ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜ್ ದೇಸಾಯಿ, ತಾಲೂಕು ಪಂಚಾಯತ ಮಾಜಿ ಅಧ್ಯಕ್ಷ ಶ್ರೀಶೈಲ ಸುಳ್ಳದ, ಭೀಮನಗೌಡ ಪಾಟೀಲ್, ರಾಮನಗೌಡ ಪಾಟೀಲ್, ವೆಂಕಟೇಶ ನಿಡೋಣಿ, ಸುಭಾಸ ಪಾಟೀಲ್, ಸಂಗನಗೌಡ ಪಾಟೀಲ್, ಸಂಗಣ್ಣ ಹುಣಸಿಕಟ್ಟಿ, ಶಿವಾನಂದ ಕಳ್ಳಿಗುದ್ದಿ, ಹಣಮಂತ ಮುದಕರೆಡ್ಡಿ, ವೆಂಕಣ್ಣ ಬಿರಾದಾರ, ರಮೇಶ ಗಡದಾನಿ, ವಿಠ್ಠಲ ಶೇಬಾನಿ, ಸುರೇಶ ಪೂಜಾರಿ, ಗೋವಿಂದಪ್ಪ ಶಿರಬೂರ, ಮಹೇಶ್ ಯರಗಟ್ಟಿ, ಸುರೇಶ್ ಬಿರಾದಾರ, ಸುರೇಶ್ ಕೊಡಬಾಗಿ, ಸುನೀಲ್‍ಗೌಡ ಪಾಟೀಲ್, ಮಹಾದೇವ ಮಾಸರೆಡ್ಡಿ, ವಿಜಯ್ ಸುತಗುಂಡಿ, ವೆಂಕಪ್ಪ ಚಿಕ್ಕಗಲಗಲಿ, ಅರವಿಂದ್ ಗುರಡ್ಡಿ, ವಿಠ್ಠಲ ಪೋತರೆಡ್ಡಿ, ಗಿರೀಶ್ ಪಾಟೀಲ್ ಸೇರಿದಂತೆ ಚಿಕ್ಕಗಲಗಲಿ, ಜೈನಾಪುರ, ಲಿಂಗದಳ್ಳಿ, ಹಂಗರಗಿ, ಬೆಳ್ಳುಬ್ಬಿ, ಬಬಲಾದ, ದೇವರಗೆಣ್ಣೂರ, ಕಣಬೂರ, ಹೊಸೂರ, ಸುತಗುಂಡಿ, ಜಂಬಗಿ, ಶಿರಬೂರ, ಮಂಗಳೂರ, ತಾಜಪೂರ ಗ್ರಾಮದ ರೈತರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications