ಚಾಮರಾಜನಗರ: ಕುಡಿದು ಬಂದ ಪತಿಗೆ ಪತ್ನಿ ಕಪಾಳಮೋಕ್ಷ ಮಾಡಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪ್ರಭುಸ್ವಾಮಿ ಮೃತ ಪತಿ. ಈತ ಆಗಾಗ್ಗೆ ಕುಡಿದು ಬಂದು ಪತ್ನಿ ಅಂಬಿಕಾ ಜೊತೆ ಜಗಳ ಮಾಡುತ್ತಿದ್ದನು. ಶನಿವಾರ ಕೂಡ ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಆಗ ಪತ್ನಿ ಅಂಬಿಕಾ ಕೋಪಗೊಂಡು ಪತಿ ಪ್ರಭುಸ್ವಾಮಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಈ ವೇಳೆ ಪ್ರಭುಸ್ವಾಮಿ ಕುಸಿದುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಇದರಿಂದ ಹೆದರಿದ ಅಂಬಿಕಾ ಇದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪತಿಯ ಶವವನ್ನು ನೇಣು ಹಾಕಿದ್ದಾಳೆ. ಆದರೆ ಪ್ರಭುಸ್ವಾಮಿಯ ಸಹೋದರಿಯರಿಗೆ ಅನುಮಾನ ಬಂದು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಂಬಿಕಾಳನ್ನು ಬಂಧಿಸಿದ್ದಾರೆ. ಮೃತ ಪ್ರಭುಸ್ವಾಮಿಯ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಸಂಬಂಧಿಕರಿಗೆ ಒಪ್ಪಿಸಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]