ಚಿಕ್ಕಮಗಳೂರು: ಒಂದೆಡೆ ಆರೋಗ್ಯ ಸಮಸ್ಯೆ ಇಟ್ಟುಕೊಂದು ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ. ಇನ್ನೊಂದೆಡೆ ಕುಡುಕರ ಹಾವಳಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯೇ ಮದ್ಯದಂಗಡಿ ರೀತಿ ಆಗಿಬಿಟ್ಟಿದೆ.
ಹೌದು. ಚಿಕಿತ್ಸೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳು ಸರಿಯಾದ ಸೌಲಭ್ಯ ಸಿಗದೇ ಕಷ್ಟಪಡುತ್ತಿದ್ದಾರೆ. ಅಲ್ಲದೆ ಜಿಲ್ಲಾಸ್ಪತ್ರೆ ನಿರ್ವಹಣೆಯನ್ನು ಸಿಬ್ಬಂದಿ ಸರಿಯಾಗಿ ಮಾಡದೇ ನಿರ್ಲಕ್ಷ್ಯ ತೋರಿರುವುದಕ್ಕೆ ಆಸ್ಪತ್ರೆ ಕುಡುಕರಿಗೆ ಮದ್ಯ ಸೇವಿಸೋ ಅಡ್ಡೆಯಾಗಿಬಿಟ್ಟಿದೆ. ಆಸ್ಪತ್ರೆಯ ಸುತ್ತಮುತ್ತಲ ಆವರಣ, ಶೌಚಾಲಯಗಳು ಹೀಗೆ ಎಲ್ಲೆಂದರಲ್ಲಿ ಮದ್ಯದ ಬಾಟಲಿ ಹಾಗೂ ಪ್ಯಾಕೆಟ್‍ಗಳೇ ರಾರಾಜಿಸುತ್ತಿದೆ. ಎಲ್ಲೆಂದರಲ್ಲಿ ಮದ್ಯ ಸೇವಿಸಿ ಆಸ್ಪತ್ರೆ ಆವರಣವನ್ನು ಕುಡುಕರು ಗಬ್ಬೆಬ್ಬಿಸಿದ್ದಾರೆ.
Advertisement
Advertisement
ಅಷ್ಟೇ ಅಲ್ಲದೆ ಮದ್ಯ ಕುಡಿದು ಆಸ್ಪತ್ರೆಯ ಗೋಡೆ ಮೇಲೆ ಬಾಟಲಿಗಳನ್ನು ಕುಡುಕರು ಸಾಲಾಗಿ ಜೋಡಿಸಿಟ್ಟಿದ್ದಾರೆ. ಇದನ್ನೆಲ್ಲಾ ನೋಡಿಕೊಂಡು ಜಿಲ್ಲಾಸ್ಪತ್ರೆ ಸಿಬ್ಬಂದಿ ಸುಮ್ಮನಿದ್ದು, ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಸಿಬ್ಬಂದಿ ನಿರ್ಲಕ್ಷ್ಯಕ್ಕೆ ರೋಗಿಗಳು ಹೈರಾಣಾಗಿದ್ದಾರೆ. ಆಸ್ಪತ್ರೆ ಶೌಚಾಲಯಕ್ಕೆ ಹೋಗಲು ರೋಗಿಗಳಿಗೆ ವಾಕರಿಕೆ ಬರುವ ದುಸ್ಥಿತಿ ಇದೆ.
Advertisement
Advertisement
ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಕಂಡು ಬೇಸತ್ತು ಹೋದ ಕೆಲ ರೋಗಿಗಳು ಆಸ್ಪತ್ರೆಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಸದ್ಯ ಜಿಲ್ಲಾಸ್ಪತ್ರೆಯ ಮದ್ಯದ ಅವಾಂತರ ಎಲ್ಲೆಡೆ ವೈರಲ್ ಆಗಿದ್ದು, ಸ್ವಚ್ಛತೆಗೆ ಆದ್ಯತೆ ಕೊಡದ ಅಧಿಕಾರಿ, ಸಿಬ್ಬಂದಿ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಆರೋಗ್ಯ ಸಚಿವರು ಗಮನಹರಿಸಿ, ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರಕ್ಕೆ ಬ್ರೇಕ್ ಹಾಕಬೇಕಿದೆ.