ಚಂಡೀಗಢ: ಕಚೇರಿ, ಸಾರ್ವಜನಿಕ ಸ್ಥಳ ಹೀಗೆ ಕೆಲವೆಡೆ ಮದ್ಯಪಾನ ಮಾಡೋದು ನಿಷೇಧ. ಆದರೆ ಹರ್ಯಾಣದ (Haryana) ಸರ್ಕಾರ ಎಣ್ಣೆ ಪ್ರಿಯರಿಗೆ ಒಂದು ಸಿಹಿ ಸುದ್ದಿ ನೀಡಿದೆ. ಕಾರ್ಪೊರೇಟ್ ಕಚೇರಿಯಲ್ಲಿ (Corporate Office) ಕೆಲಸ ಮಾಡುತ್ತ ಸಹೋದ್ಯೋಗಿಗಳೊಂದಿಗೆ ಮದ್ಯಪಾನ ಮಾಡಬಹುದಾದಂತಹ ಹೊಸ ನಿಯಮವನ್ನು ಸರ್ಕಾರ ತಂದಿದೆ.
ಹರಿಯಾಣ ಮದ್ಯ ನೀತಿಯ (Haryana Liquor Policy) ಪ್ರಕಾರ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಿದಂತೆ ಜೂನ್ 12 ರಿಂದ ರಾಜ್ಯಾದ್ಯಂತ ದೊಡ್ಡ ಕಾರ್ಪೊರೇಟ್ ಕಚೇರಿಗಳಲ್ಲಿ ಕಡಿಮೆ ಕಂಟೆಂಟ್ ಆಲ್ಕೋಹಾಲ್ (Alcohol) ಪಾನೀಯಗಳಾದ ಬಿಯರ್, ವೈನ್ ಮತ್ತು ರೆಡಿ ಟು ಡ್ರಿಂಕ್ ಪಾನೀಯಗಳನ್ನು ಸೇವಿಸಲು ಸರ್ಕಾರ ಅನುಮತಿ ನೀಡುತ್ತಿದೆ.
ಹರಿಯಾಣ ಮದ್ಯ ನೀತಿಯ ಈ ಹೊಸ ನಿಯಮವನ್ನು ಮೇ 9 ರಂದು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಕನಿಷ್ಠ 5,000 ಉದ್ಯೋಗಿಗಳನ್ನು ಹೊಂದಿರುವ ಕಾರ್ಪೊರೇಟ್ ಕಚೇರಿಯಲ್ಲಿ ಉದ್ಯೋಗಿಗಳು ಬಿಯರ್ (Beer) ಹಾಗೂ ವೈನ್ನಂತಹ (Wine) ಪಾನೀಯಗಳನ್ನು ಸೇವಿಸಬಹುದು. ಒಂದು ಲಕ್ಷ ಚದರ ಅಡಿ ವ್ಯಾಪ್ತಿಯ ಪ್ರದೇಶದಲ್ಲಿ ಹಾಗೂ ಒಂದೇ ಆವರಣದೊಳಗೆ ಮದ್ಯಪಾನಕ್ಕೆ ಅನುಮತಿ ನೀಡಲಾಗುತ್ತಿದೆ.
ಇದರರ್ಥ ನೀವು ದೊಡ್ಡ ಕಾರ್ಪೊರೇಟ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರೆ ಕಚೇರಿಯ ಆವರಣದಲ್ಲಿ ಬಿಯರ್ ಅಥವಾ ವೈನ್ ಕುಡಿಯಬಹುದು. ಇವುಗಳನ್ನು ಕಚೇರಿಯಲ್ಲಿಯೇ ನೀಡಬೇಕು ಎಂದೇನಿಲ್ಲ. ನೀವು ಸ್ವಂತವಾಗಿಯೂ ಖರೀದಿಸಿ ಕಚೇರಿಯಲ್ಲಿ ಸೇವನೆ ಮಾಡಬಹುದು. ಇದನ್ನೂ ಓದಿ: ಆಟೋ ರಿಕ್ಷಾ, ಖಾಸಗಿ ಬಸ್ ಡಿಕ್ಕಿ – 6 ಮಹಿಳೆಯರು ಸಾವು, ನಾಲ್ವರಿಗೆ ಗಾಯ
ಹರಿಯಾಣ ಮದ್ಯ ನೀತಿಯ ಪ್ರಕಾರ ಕಾರ್ಪೊರೇಟ್ ಕಚೇರಿಗಳು ಎಲ್-10ಎಫ್ ಮದ್ಯದ ಪರವಾನಗಿ ಪಡೆಯಲು ಅರ್ಜಿ ಸಲ್ಲಿಸಬೇಕಾಗುತ್ತದೆ. ಇದು ಬಿಯರ್ ಮತ್ತು ವೈನ್ನಂತಹ ಕಡಿಮೆ ಆಲ್ಕೋಹಾಲ್ ಅಂಶದ ಪಾನೀಯಗಳನ್ನು ಸೇವಿಸಲು ಅನುವು ಮಾಡಿಕೊಡುತ್ತದೆ. ಕ್ಯಾಂಟೀನ್ ಅಥವಾ ಉಪಾಹಾರ ಗೃಹದ ಕನಿಷ್ಠ ವಿಸ್ತೀರ್ಣವು 2,000 ಚದರ ಅಡಿಗಳಿಗಿಂತ ಕಡಿಮೆಯಿಲ್ಲದಿದ್ದರೆ ಕಾರ್ಪೊರೇಟ್ ಕಚೇರಿ ಪರವಾನಗಿ ಪಡೆಯಬಹುದು. ಪರವಾನಿಗೆ ಪಡೆಯುವ ಕಚೇರಿ 3 ಲಕ್ಷ ರೂ. ಭದ್ರತಾ ಮೊತ್ತವನ್ನು ಠೇವಣಿ ಇಡಬೇಕು. ಇದನ್ನೂ ಓದಿ: ಹಾಸನದ ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆಗಳ ಉಪಟಳ – ಇಬ್ಬರಿಗೆ ತೀವ್ರ ಗಾಯ