2 ತಿಂಗಳು ನಾವು ಬಾರ್‌ಗೆ ಹೋಗದಿದ್ರೆ ಸರ್ಕಾರವೇ ಬಿದ್ದು ಹೋಗುತ್ತೆ – ಮದ್ಯಪಾನಪ್ರಿಯರ ಸಂಘದ ರಾಜ್ಯಾಧ್ಯಕ್ಷ

Public TV
2 Min Read
VENKATESH GOWDA

– ಅಬಕಾರಿ ಸುಂಕ ಇಳಿಸದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

ಹಾಸನ: 2 ತಿಂಗಳು ಮದ್ಯಪ್ರಿಯರು ಬಾರ್‌ಗಳ ಬಳಿ ಹೋಗದಿದ್ದರೆ ಸರ್ಕಾರವೇ ಬಿದ್ದು ಹೋಗುತ್ತದೆ. ಸರ್ಕಾರ ನಡೆಯುತ್ತಿರುವುದೇ ಮದ್ಯಪ್ರಿಯರಿಂದ  (Alcohol) ಎಂದು ಕರ್ನಾಟಕ ಮದ್ಯಪಾನಪ್ರಿಯರ ಹೋರಾಟ ಸಂಘದ ರಾಜ್ಯಾಧ್ಯಕ್ಷ ವೆಂಕಟೇಶ್‍ಗೌಡ ಹೇಳಿದ್ದಾರೆ.

ಹಾಸನದಲ್ಲಿ (Hassan) `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, 20% ಅಬಕಾರಿ ಸುಂಕ (Excise) ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ. ರಾಜ್ಯ ಸರ್ಕಾರ ಮದ್ಯಪ್ರಿಯರಿಂದ ಸುಲಿಗೆ ಮಾಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ಬೆಳಗಾವಿ ಅಧಿವೇಶನದ ನಂತರ 30% ಅಬಕಾರಿ ಸುಂಕ ಹೆಚ್ಚಳ ಮಾಡಿತ್ತು. ಇದೇ ಕಾಣರಕ್ಕೆ 90% ರಷ್ಟು ಮದ್ಯಪ್ರಿಯರು ಕಾಂಗ್ರೆಸ್‍ಗೆ ಮತ ಹಾಕಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಐದು ಗ್ಯಾರಂಟಿಗಳನ್ನು ಈಡೇರಿಸಲು 20% ಅಬಕಾರಿ ಸುಂಕ ಹೆಚ್ಚಳ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್‌ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಕ್ರಮ – ಮುಷ್ಕರ ನಡೆಸದಂತೆ ಸಚಿವ ದಿನೇಶ್ ಗುಂಡೂರಾವ್ ಕರೆ

ಗಂಡನಿಂದ ತಿಂಗಳಿಗೆ 10,000 ರೂ. ಸುಂಕದ ರೂಪದಲ್ಲಿ ಹಣ ವಸೂಲಿ ಮಾಡಿ ಪತ್ನಿಗೆ 2,000 ರೂ. ನೀಡಲು ಮುಂದಾಗಿದ್ದಾರೆ. ಕೂಡಲೇ ಹೆಚ್ಚಳ ಮಾಡಿರುವ ಅಬಕಾರಿ ಸುಂಕವನ್ನು ಹಿಂಪಡೆಯಬೇಕು. ಹಿಂದಿನ ಬಿಜೆಪಿ ಸರ್ಕಾರ ಹೆಚ್ಚಳ ಮಾಡಿದ್ದ 30% ಅಬಕಾರಿ ಸುಂಕವನ್ನು ರದ್ದು ಮಾಡಿ 10% ಸುಂಕ ಇಳಿಕೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡುವುದಾಗಿ ಎಚ್ಚರಿಸಿದ್ದಾರೆ.

ವಿರೋಧ ಪಕ್ಷದ ಶಾಸಕರು ಕೂಡ ನಮ್ಮ ಪರ ಧ್ವನಿ ಎತ್ತುತ್ತಿಲ್ಲ. ಅವರನ್ನು ಎಚ್ಚರಿಸುವ ಕೆಲಸವನ್ನೂ ಮಾಡಬೇಕಾಗಿದೆ. ಈಗಾಗಲೇ ಮದ್ಯಪ್ರಿಯರ 20 ಬೇಡಿಕೆಗಳ ಮನವಿಯನ್ನು ಹಿಂದೆ ಅಬಕಾರಿ ಸಚಿವರಾಗಿದ್ದ ಕೆ.ಗೋಪಾಲಯ್ಯ ಅವರಿಗೆ ಮನವಿ ಸಲ್ಲಿಸಿದ್ದೇನೆ. ಆ ಬೇಡಿಕೆಗಳಲ್ಲಿ ಒಂದನ್ನು ಕೂಡ ಈಡೇರಿಸಿಲ್ಲ. ನಾವು ಯಾರಿಗೂ ಮದ್ಯ ಕುಡಿಯುವಂತೆ ಪ್ರಚೋದನೆ ನೀಡುತ್ತಿಲ್ಲ. ‘ನಿತ್ಯ ದುಡಿ ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ’ ಎಂಬ ಧ್ಯೇಯವಾಕ್ಯ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಿದರೆ ಡ್ರಂಕ್ ಅಂಡ್ ಡ್ರೈವ್ ಕೇಸ್ ಹಾಕಿ 10,000 ರೂ. ದಂಡ ಹಾಕುತ್ತಾರೆ. ಎಲ್ಲಾ ರೀತಿಯಿಂದಲೂ ಮದ್ಯಪ್ರಿಯರನ್ನು ಶೋಷಣೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ರಾಜ್ಯಾದ್ಯಂತ ಇರುವ ನಮ್ಮ ಸಂಘದ ಎಲ್ಲಾ ಸದಸ್ಯರ ಸಭೆ ಕರೆದು ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಅಬಕಾರಿ ಸುಂಕ ಇಳಿಸದಿದ್ದರೆ ಫ್ರೀಡಂಪಾರ್ಕ್‍ನಲ್ಲಿ ಅನಿರ್ಧಿಷ್ಠಾವಧಿ ಧರಣಿ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಡಿವೋರ್ಸ್‍ಗಾಗಿ ಕೋರ್ಟ್ ಮೆಟ್ಟಿಲೇರಿದ್ದ 15 ಜೋಡಿ ಒಂದಾಗಿಸಿದ ನ್ಯಾಯಾಧೀಶರು

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article