ಮಂಡ್ಯ: ಚಾಲಕನೋರ್ವ ಕುಡಿದ ಮತ್ತಿನಲ್ಲಿ ರೇಂಜ್‍ರೋವರ್ ಕಾರನ್ನು ಚಲಿಸುವ ವೇಳೆ, ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಸಲಗೆರೆ ಗ್ರಾಮದ ಬಳಿ ಜರುಗಿದೆ.
ಕಸಲಗೆರೆ ಗ್ರಾಮದ ನಿವಾಸಿ ಚಂದಣ್ಣ (50) ಮೃತ ವ್ಯಕ್ತಿ. ಅದೇ ಗ್ರಾಮದ ಬಸವರಾಜು ಎಂಬಾತ ಬೆಂಗಳೂರಿನಲ್ಲಿ ವಾಸವಾಗಿದ್ದು, ಕೆಲಸದ ನಿಮಿತ್ತ ಬೇರೆಯವರ ರೇಂಜ್‍ರೋವರ್ ಕಾರನ್ನು ಕಸಲಗೆರೆಗೆ ಬರುತ್ತಿರುವ ವೇಳೆ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಶೌಚಾಲಯ ಬಳಕೆಗೆ ಗಲಾಟೆ-9 ಮಂದಿ ಪೊಲೀಸ್ ವಶಕ್ಕೆ
ಬಸವರಾಜು ಬೆಂಗಳೂರಿನಿಂದ ಕಸಲಗೆರೆಗೆ ಬರುವ ವೇಳೆ ಮಾರ್ಗ ಮಧ್ಯದಲ್ಲಿ ಮದ್ಯಪಾನ ಸೇವನೆ ಮಾಡಿ ಕಾರನ್ನು ಚಲಾಯಿಸಿಕೊಂಡು ಬಂದಿದ್ದಾನೆ. ಈ ವೇಳೆ ಗ್ರಾಮದ ರಸ್ತೆ ಬದಿಯಲ್ಲಿ ಚಂದ್ರಣ್ಣ ನಿಂತಿದ್ದ ವೇಳೆ, ಬಸವರಾಜುಗೆ ಕುಡಿದ ಮತ್ತಿನಲ್ಲಿ ಕಾರು ನಿಯಂತ್ರಣಕ್ಕೆ ಸಿಗದೇ ಚಂದ್ರಣ್ಣನಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ವೇಗ ಹೆಚ್ಚಿದ್ದ ಕಾರಣ ಚಂದ್ರಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಹೈದಾರಾಬಾದ್‍ಗೆ ಬೇಡವಾದ ಡೇವಿಡ್ ವಾರ್ನರ್
ಈ ಕಾರು ಬೆಂಗಳೂರಿನ ದಕ್ಷಿಣ ಕ್ಷೇತ್ರದ ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಅವರದ್ದು ಎನ್ನಲಾಗುತ್ತಿದ್ದು, ಈ ಬಗ್ಗೆ ಇನ್ನೂ ಪೊಲೀಸರು ಖಚಿತ ಪಡಿಸಿಲ್ಲ. ಸದ್ಯ ಚಾಲಕ ಬಸವರಾಜುನನ್ನು ವಶಕ್ಕೆ ಪಡೆದಿರುವ ನಾಗಮಂಗಲ ಗ್ರಾಮಾಂತರ ಪೊಲೀಸರು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.