ಬೆಂಗಳೂರು: ಅಂಬಿಡೆಂಟ್ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನ್ಯಾಯಾಲಯ ಜಾಮೀನು ನೀಡಿದ್ದರೆ, ಇತ್ತ ರೆಡ್ಡಿ ಆಪ್ತ ಅಲಿಖಾನ್ 18 ಕೋಟಿ ರೂ.ಗಳನ್ನು ವಾಪಸ್ ನೀಡುವುದಾಗಿ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದಾನೆ.
ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿರುವ ಅಲಿಖಾನ್ ಪೂರ್ತಿ ಹಣವನ್ನು ಹಿಂದಿರುಗಿಸುತ್ತೇನೆ. ಸ್ವಲ್ಪ ಕಾಲಾವಕಾಶ ನೀಡಿ ಎಂದು ಮನವಿ ಸಲ್ಲಿಸಿದ್ದಾನೆ. ಅಲಿಖಾನ್ ಪ್ರಮಾಣ ಪತ್ರಕ್ಕೆ ಸಿಸಿಬಿ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದು, ಹಣ ನೀಡುವುದಾಗಿ ಹೇಳಿರುವ ಅಲಿಖಾನ್ ಎಷ್ಟು ದಿನಗಳಲ್ಲಿ ನೀಡುತ್ತಾರೆ ಎಂದು ತಿಳಿಸಿಲ್ಲ ಎಂದು ಹೇಳಿದ್ದರು. ಆದರೆ ಸಿಸಿಬಿ ಪೊಲೀಸರ ಅಕ್ಷೇಪದ ಬಳಿಕ 10 ದಿನಗಳಲ್ಲಿ ಹಣ ವಾಪಸ್ ನೀಡುತ್ತೇನೆ ಎಂದು ಮತ್ತೊಂದು ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
Advertisement
Advertisement
ನ್ಯಾಯಾಲಯಕ್ಕೆ ಸಲ್ಲಿಕೆ ಆಗಿರುವ ಪ್ರಮಾಣ ಪಾತ್ರದಲ್ಲಿ ಅಲಿಖಾನ್ ನಾನು ದೇವರ ಹರಕೆ ತಿರುಸಲು ಚಿನ್ನವನ್ನು ಬಳಕೆ ಮಾಡಿಕೊಂಡಿದ್ದು, ಫರೀದ್ ಬಳಿ ಸಾಲದ ರೂಪದಲ್ಲಿ ಹಣ ಪಡೆದಿದ್ದೇನೆ. ದೇವರ ಹರಕೆ ತಿರಿಸಲು ಹಣ ಖರ್ಚು ಆಗಿದ್ದು, 10 ದಿನಗಳಲ್ಲಿ ಹಣ ಪಾವತಿ ಮಾಡುತ್ತೇನೆ ಎಂದು ತಿಳಿಸಲಾಗಿದೆ.
Advertisement
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಸಿಗುತ್ತದೆ ಎಂಬ ನಿರೀಕ್ಷೆ ಮೇಲೆ ರೆಡ್ಡಿ ಸಹೋದರ ಕರುಣಾಕರ ರೆಡ್ಡಿ ಹಾಗೂ ಆಪ್ತ ಅಲಿಖಾನ್ ಪರಪ್ಪನ ಆಗ್ರಹಾರ ಜೈಲಿನ ಬಳಿ ಆಗಮಿಸಿದ್ದಾರೆ. ಇತ್ತ ಜಾಮೀನು ಸಿಕ್ಕ ಖುಷಿ ಸಂಗತಿ ತಿಳಿಸಿದ ಜನಾರ್ದನ ರೆಡ್ಡಿ ಬೆಂಬಲಿಗರು ಜೈಲಿನ ಬಳಿ ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews