ಬಾಲಿವುಡ್ ಬ್ಯೂಟಿ ಆಲಿಯಾ ಭಟ್ ತಾವು ತಾಯಿಯಾಗುತ್ತಿರುವ ವಿಚಾರ ತಿಳಿಸಿದ ಮೇಲೆ ಖಾಸಗಿ ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಹಾಲಿವುಡ್‌ನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ವೇಳೆ ತಮ್ಮ ಬೇಬಿ ಬಂಪ್ ಫೋಟೋ ಮೂಲಕ ಸಖತ್ ಸುದ್ದಿಯಲ್ಲಿದ್ದರು. ಈಗ ಅವಳಿ ಮಕ್ಕಳಿಗೆ ಆಲಿಯಾ ಜನ್ಮ ನೀಡುತ್ತಾರೆ ಎಂಬ ಸುದ್ದಿಯ ಮೂಲಕ ಸಖತ್ ಸೌಂಡ್ ಮಾಡುತ್ತಾರೆ. ಇದಕ್ಕೆಲ್ಲ ಕಾರಣ ರಣ್‌ಬೀರ್ ಕಪೂರ್ ಇತ್ತೀಚೆಗಷ್ಟೇ ನೀಡಿರುವ ಸಂದರ್ಶನದಲ್ಲಿ ಹೇಳಿರುವ ರೀತಿ ಸುದ್ದಿಯಾಗುತ್ತಿದೆ.
ಕಪೂರ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಆಲಿಯಾ ಮತ್ತು ರಣ್‌ಬೀರ್ ಪೋಷಕರಾಗುತ್ತಿರುವ ಖುಷಿಯಲ್ಲಿದ್ದಾರೆ. ಇನ್ನು ರಣ್‌ಬೀರ್ ಕಪೂರ್ `ಶಂಷೇರಾ’ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ಸಂದರ್ಶನದಲ್ಲಿ ರಣ್‌ಬೀರ್‌ಗೆ ತಮ್ಮ ಖಾಸಗಿ ಬದುಕಿನ ಬಗ್ಗೆ ಪ್ರಶ್ನೆ ಕೇಳಲಾಗುತ್ತಿದೆ. ಇದನ್ನೂ ಓದಿ:ಸುದೀಪ್ ಸಿನಿಮಾ ನಾಯಕಿ ವರಲಕ್ಷ್ಮಿ ಶರತ್‌ಕುಮಾರ್‌ಗೆ ಕೋವಿಡ್ ಪಾಸಿಟಿವ್



