ನವದೆಹಲಿ: ಜನನ ಹಾಗೂ ಮರಣಕ್ಕೆ ಸಂಬಂಧಿಸಿದ ದತ್ತಾಂಶವನ್ನು (Birth and Death Data) ಮತದಾರರ ಪಟ್ಟಿಗೆ (Electoral Roll) ಜೋಡಿಸಲು ಸಂಸತ್ತಿನಲ್ಲಿ ಮಸೂದೆಯನ್ನು ತರಲು ಸರ್ಕಾರ ಯೋಜಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದ್ದಾರೆ.
ಸೋಮವಾರ ಭಾರತೀಯ ರಿಜಿಸ್ಟ್ರಾರ್ ಜನರಲ್ ಹಾಗೂ ಜನಗಣತಿ ಆಯುಕ್ತರ ಕಚೇರಿ ‘ಜಂಗಣ್ಣನ ಭವನ’ವನ್ನು ಉದ್ಘಾಟಿಸಿದ ಶಾ ಬಳಿಕ ಮಾತನಾಡಿ, ವ್ಯಕ್ತಿಯ ಜನನ ಹಾಗೂ ಮರಣದ ನೋಂದಣಿಯನ್ನು ಮತದಾರರ ಪಟ್ಟಿಯೊಂದಿಗೆ ಜೋಡಿಸುವ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು. ಈ ಪ್ರಕ್ರಿಯೆಯ ಅಡಿಯಲ್ಲಿ ಒಬ್ಬ ವ್ಯಕ್ತಿಗೆ 18 ವಯಸ್ಸು ತುಂಬಿದಾಗ ಆತನ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸ್ವಯಂಚಾಲಿತವಾಗಿ ಸೇರಿಸಲಾಗುತ್ತದೆ. ಅದೇ ರೀತಿ ಒಬ್ಬ ವ್ಯಕ್ತಿ ಸತ್ತಾಗ ಆ ಮಾಹಿತಿ ಸ್ವಯಂಚಾಲಿತವಾಗಿ ಚುನಾವಣಾ ಆಯೋಗಕ್ಕೂ ಹೋಗಲಿದ್ದು, ಆತನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಲಾಗುತ್ತದೆ ಎಂದು ತಿಳಿಸಿದರು.
Advertisement
Advertisement
ಜನನ ಮತ್ತು ಮರಣ ನೋಂದಣಿ ಕಾಯಿದೆ (RBD), 1969 ರ ತಿದ್ದುಪಡಿ ಮಸೂದೆಯು ಡ್ರೈವಿಂಗ್ ಲೈಸೆನ್ಸ್ ಮತ್ತು ಪಾಸ್‌ಪೋರ್ಟ್‌ಗಳನ್ನು ವಿತರಿಸಲು ಹಾಗೂ ಇತರ ಜನರಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ನೀಡಲು ಸಂಬಂಧಿಸಿದ ವಿಷಯಗಳನ್ನು ಸಹ ಸುಗಮಗೊಳಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರದ ಬಳಿ ಅಂಕಿ ಅಂಶಗಳೇ ಇಲ್ಲ – ಶೀಘ್ರವೇ ಗ್ಯಾರಂಟಿ ಯೋಜನೆ ಜಾರಿ ಅನುಮಾನ
Advertisement
ಅಭಿವೃದ್ಧಿಗೆ ಸಾಕಷ್ಟು ಮಾಹಿತಿಗಳು ಲಭ್ಯವಾಗದ ಕಾರಣ ಮೊದಲು ಅಭಿವೃದ್ಧಿ ಪ್ರಕ್ರಿಯೆ ನಿಧಾನಗತಿಯಲ್ಲಿ ನಡೆಯುತ್ತಿತ್ತು. ಜನನ ಹಾಗೂ ಮರಣ ಪ್ರಮಾಣ ಪತ್ರದ ದತ್ತಾಂಶವನ್ನು ವಿಶೇಷ ರೀತಿಯಲ್ಲಿ ಸಂರಕ್ಷಿಸಿದರೆ ಜನಗಣತಿ ನಡುವಿನ ಸಮಯವನ್ನು ಅಂದಾಜಿಸಿ ಅಭಿವೃದ್ಧಿ ಕಾಮಗಾರಿಗಳ ಯೋಜನೆಯನ್ನು ಸಮರ್ಪಕವಾಗಿ ಮಾಡಬಹುದು ಎಂದು ತಿಳಿಸಿದ್ದಾರೆ.
Advertisement
ಇನ್ನು ಮುಂದೆ ಜನಗಣತಿಯನ್ನು ವಿದ್ಯುನ್ಮಾನ ಮಾದರಿಯಲ್ಲಿ ಕೈಗೊಳ್ಳಲಿದ್ದು, ಸ್ವಯಂ ಗಣತಿಗೂ ಅವಕಾಶ ಕಲ್ಪಿಸಲಾಗುವುದು ಎಂದು ಶಾ ತಿಳಿಸಿದ್ದಾರೆ. ಇದನ್ನೂ ಓದಿ: ಮಧ್ಯರಾತ್ರಿ ಕರೆ – ಸ್ಪೀಕರ್ ಆಗಲಿದ್ದಾರೆ ಯುಟಿ ಖಾದರ್