ಚಿಕ್ಕಬಳ್ಳಾಪುರ: ಇರಾನ್‌ನ ಪರಮೋಚ್ಚ ಧಾರ್ಮಿಕ ನಾಯಕ ಆಯತೊಲ್ಲಾ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಿಂದ 20 ರಿಂದ 25 ಮಂದಿ ಇರಾನ್‌ಗೆ ತೆರಳಿದ್ದಾರೆ.
ಇದೇ ವೇಳೆ ಗ್ರಾಮದಲ್ಲೂ ಅಂತ್ಯಕ್ರಿಯೆಯ ನೇರ ಪ್ರಸಾರ ವೀಕ್ಷಣೆಗೆ ವಿಶೇಷ ಸಿದ್ಧತೆ ಮಾಡಲಾಗಿದೆ.ಇದನ್ನೂ ಓದಿ: ಇಂಗಳದಾಳ್ ಬಳಿ ಶವ ಪತ್ತೆ ಕೇಸ್ – ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಭಾವನ ಹತ್ಯೆಗೆ ನಾದಿನಿ ಸ್ಕೆಚ್
ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಶಿಯಾ ಮುಸ್ಲಿಂ ಸಮುದಾಯ ವಾಸಿಸುವ ಗ್ರಾಮ ಎಂಬ ಹೆಗ್ಗಳಿಕೆ ಹೊಂದಿರುವ ಅಲೀಪುರದಲ್ಲಿ ಇಂದು ವಿಶೇಷ ಧಾರ್ಮಿಕ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಬೃಹತ್ ಎಲ್‌ಇಡಿ ಪರದೆಗಳನ್ನು ಅಳವಡಿಸಿ ಅಂತ್ಯಕ್ರಿಯೆಯ ನೇರ ಪ್ರಸಾರ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.
ಮಧ್ಯಾಹ್ನ 3 ಗಂಟೆಯ ನಂತರ ನಡೆಯಲಿರುವ ಅಂತ್ಯಕ್ರಿಯೆಯನ್ನು ನೂರಾರು ಗ್ರಾಮಸ್ಥರು ಒಟ್ಟಾಗಿ ವೀಕ್ಷಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇರಾನ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಲೀಪುರದಲ್ಲಿ ಭಕ್ತಿಭಾವದ ವಾತಾವರಣ ಕಂಡುಬಂದಿದ್ದು, ಗ್ರಾಮಸ್ಥರು ನೇರ ಪ್ರಸಾರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಭೂಕುಸಿತಕ್ಕೆ ಇಬ್ಬರು ಬಲಿ – ನಾಲ್ವರು ಅವಶೇಷಗಳ ಅಡಿ ಸಿಲುಕಿರುವ ಶಂಕೆ
