ಭುವನೇಶ್ವರ: ನಾನು ರೈಲಿನ ಕಿಟಕಿಯ ಬದಿಯಲ್ಲಿ ಕುಳಿತಿದ್ದೆ. ದೊಡ್ಡದಾಗಿ ಶಬ್ದ ಕೇಳಿಸಿ ರೈಲು ಕಂಪಿಸಿತು. ನಾನು ಕೂಡಲೇ ಕಿಟಕಿಯ ಸರಳುಗಳನ್ನು ಹಿಡಿದುಕೊಂಡೆ. ನಾನಿದ್ದ ಬೋಗಿ ಉರುಳಿದರೂ ಸರಳಗಳನ್ನು ಬಿಟ್ಟಿರಲಿಲ್ಲ ಇದರಿಂದಾಗಿ ನಾನು ಬದುಕಿದೆ ಎಂದು ಒಡಿಶಾದಲ್ಲಿ ನಡೆದ ರೈಲು ಅಪಘಾತದಿಂದ ಬಚಾವಾದ ಅಸ್ಸಾಂ ಮೂಲದ ದೀಪಕ್ ದಾಸ್ ಹೇಳಿದ್ದಾರೆ.
Advertisement
ಬಿಹಾರ ಮೂಲದ ಮತ್ತೊಬ್ಬ ವ್ಯಕ್ತಿಯೊಬ್ಬರು ಮಾತನಾಡಿ, ನಮ್ಮ ರೈಲು ಬೇರೆ ರೈಲಿಗೆ ಡಿಕ್ಕಿ ಹೊಡೆದಾಗ ನನಗೆ ದೊಡ್ಡ ಶಬ್ದ ಮಾತ್ರ ಕೇಳಿಸಿತು. ಏನಾಯಿತು ಎಂದು ನನಗೆ ನಿಖರವಾಗಿ ನೆನಪಿಲ್ಲ. ನನ್ನ ಕುಟುಂಬಕ್ಕೆ ಅಪಘಾತದಿಂದ ಚಿಕಿತ್ಸೆ ಪಡೆಯುತ್ತಿರುವ ಮಾಹಿತಿ ತಿಳಿಸಲಾಗಿದೆ. ನನ್ನನ್ನು ಮನೆಗೆ ಕರೆದುಕೊಂಡು ಹೋಗಲು ಬರುತ್ತಿದ್ದಾರೆ ಎಂದಿದ್ದಾರೆ. ಇಬ್ಬರು ಸಹ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆಯ ಕುರಿತು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಭುವನೇಶ್ವರದಲ್ಲಿ ಅಧಿಕಾರಿಗಳೊಂದಿಗೆ ಸಂತೋಷ್ ಲಾಡ್ ಸಭೆ
Advertisement
Advertisement
ಕೋರಮಂಡಲ್ ಎಕ್ಸ್‍ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ನಡುವಿನ ಭೀಕರ ಅಪಘಾತದಲ್ಲಿ ಕನಿಷ್ಠ 288 ಜನರು ಸಾವನ್ನಪ್ಪಿದ್ದರು. ದೇಶದ ಅತ್ಯಂತ ಭೀಕರ ರೈಲು ದುರಂತಗಳಲ್ಲಿ ಇದು ಒಂದಾಗಿದೆ. ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರನ್ನು ಬಾಲಸೋರ್‌ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಅಪಘಾತದ ಮೂಲ ಕಾರಣ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಎಲ್ಲಾ ಮೃತದೇಹಗಳನ್ನು ತೆಗೆದುಹಾಕಲಾಗಿದೆ. ಬುಧವಾರ ಬೆಳಿಗ್ಗೆಯಿಂದ ರೈಲು ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಅಲ್ಲದೆ ಉನ್ನತ ಮಟ್ಟದ ತನಿಖೆಗೆ ರೈಲ್ವೆ ಸಚಿವಾಲಯ ಆದೇಶಿಸಿದೆ. ಮೃತರ ಕುಟುಂಬಕ್ಕೆ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವಾಲಯ ಘೋಷಿಸಿದೆ. ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‍ಆರ್‍ಎಫ್) ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಶಾರುಖ್ ಪುತ್ರನ ಡ್ರಗ್ಸ್ ಕೇಸಲ್ಲಿ ಲಂಚದ ಆರೋಪ ಎದುರಿಸುತ್ತಿರುವ ಅಧಿಕಾರಿಗೆ ದಾವೂದ್ ಇಬ್ರಾಹಿಂ ಹೆಸರಲ್ಲಿ ಬೆದರಿಕೆ