ತುಮಕೂರು: ಸಿದ್ದಗಂಗಾ ಶ್ರೀಗಳು ದೇಹತ್ಯಾಗ ಮಾಡಿ ಇಂದಿಗೆ 9 ದಿನಗಳು ಆಗಿದೆ. 11ನೇ ದಿನವಾದ ಗುರುವಾರ ಶ್ರೀಗಳ ಪುಣ್ಯಾರಾಧನೆ ನಡೆಯಲಿದೆ. ಈ ಹಿನ್ನೆಲೆ ಮಠದಲ್ಲಿ ಸಕಲ ತಯಾರಿ ನಡೆಯುತ್ತಿದೆ. ಶ್ರೀಗಳ ಪುಣ್ಯಸ್ಮರಣೆಗೆ ರಾಜ್ಯದೆಲ್ಲೆಡೆಯಿಂದ ಭಕ್ತರು ಅನ್ನದಾಸೋಹಕ್ಕೆ ಬೇಕಾದ ದಿನಸಿ ಸಾಮಾಗ್ರಿಗಳನ್ನು ಮಠಕ್ಕೆ ಅರ್ಪಿಸಿ ತಮ್ಮ ಭಕ್ತಿ ಮೆರೆಯುತ್ತಿದ್ದಾರೆ.
Advertisement
ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳ 11ನೇ ದಿನದ ಪುಣ್ಯಸ್ಮರಣೆಗೆ ಶ್ರೀಮಠ ಸಜ್ಜಾಗುತ್ತಿದೆ. ಗುರುವಾರ ನಡೆಯಲಿರುವ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಭಕ್ತರಿಗೆ ಭಕ್ಷ್ಯ ಭೋಜನಕ್ಕೆ ಸಿದ್ಧತೆ ನಡೆಯುತ್ತಿದೆ. ಮಠದ 4 ಅಡುಗೆ ಕೊಪ್ಪಲಿನಲ್ಲಿ 100ಕ್ಕೂ ಹೆಚ್ಚು ಅಡುಗೆ ಭಟ್ಟರು ವಿವಿಧ ಸಿಹಿ ತಿನಿಸುಗಳ ತಯಾರಿ ನಡೆಯುತ್ತಿದೆ. ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ 5 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ಸಾಧ್ಯತೆ ಇದೆ. ಮಠದ ಆವರಣದಲ್ಲಿ ಸುಮಾರು ಹತ್ತು ಕಡೆ ಅನ್ನ ದಾಸೋಹಕ್ಕೂ ಸಿದ್ಧತೆ ನಡೆದಿದೆ. ಇದನ್ನೂ ಓದಿ: ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!
Advertisement
Advertisement
ಶ್ರೀಗಳ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ದಿನಸಿ ಸಾಮಾಗ್ರಿಗಳು ಹರಿದು ಬರುತ್ತಿದೆ. ಚಿತ್ರದುರ್ಗ, ದಾವಣಗೆರೆ, ಬೆಳಗಾವಿ ಸೇರಿದಂತೆ ನಾನಾ ಭಾಗಗಳಿಂದ ಭಕ್ತರು ಸ್ವಯಂ ಪ್ರೇರಿತರಾಗಿ ಸಾವಿರಾರು ಕ್ವಿಂಟಾಲ್ ಅಕ್ಕಿ, ಬೇಳೆ, ಬೆಲ್ಲ, ತರಕಾರಿ ತಂದು ಕೊಡುತ್ತಿದ್ದಾರೆ. ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಠದ ವಿದ್ಯಾರ್ಥಿಗಳು, ಸಂಸ್ಥೆಯ ಶಿಕ್ಷಕರು, ಭಕ್ತಾಧಿಗಳು ಸ್ವಯಂ ಪ್ರೇರಿತರಾಗಿ ಸಿದ್ಧತೆಯಲ್ಲಿ ತಲ್ಲೀನರಾಗಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv