ಬೆಳಗಾವಿ: ತಮಿಳುನಾಡಿಗೆ (Tamil Nadu) ಎಲ್ಲಾ ಸರ್ಕಾರಗಳು ಕಾವೇರಿ ನೀರನ್ನು (Cauvery water) ಬಿಟ್ಟಿವೆ. ಈಗ ನಾವು ನ್ಯಾಯಾಲಯದ ಆದೇಶ ಪಾಲನೆ ಮಾಡುತ್ತಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ತಮಿಳುನಾಡಿನ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಈ ನಾಡು, ನುಡಿ ಹಾಗೂ ಜಲವನ್ನು ಕಾಪಾಡಲು ನಾವು ಬದ್ಧರಾಗಿದ್ದೇವೆ. ಆದರೆ ನ್ಯಾಯಾಲಯದ ಆದೇಶ ಪಾಲಿಸಲೇಬೇಕು. ಯಾವ ಯಾವ ಸರ್ಕಾರಗಳು ಎಷ್ಟು ನೀರು ಬಿಟ್ಟಿದ್ದಾರೆ, ಬೊಮ್ಮಾಯಿಯವರು ಸಿಎಂ ಆಗಿದ್ದಾಗ ಎಷ್ಟು ನೀರು ಬಿಟ್ಟಿದ್ದಾರೆ ಎಂಬುವುದನ್ನು ನೀವೆ ಗಮನಿಸಿ ಎಂದಿದ್ದಾರೆ. ಇದನ್ನೂ ಓದಿ: ಪ್ರತಿದಿನ KRSಗೆ 1,300 ಕ್ಯೂಸೆಕ್ ನೀರು – ಹೇಮಾವತಿಯಲ್ಲೂ ನೀರಿನ ಮಟ್ಟ ಕುಸಿತ
ಕಳೆದ ಬಾರಿ ಮಳೆ ಅಭಾವ ಇರಲಿಲ್ಲ. ಹಾಗಾಗಿ ಸಮಸ್ಯೆಯೂ ಇರಲಿಲ್ಲ. ಸಮಸ್ಯೆಯಾಗುವುದು ನೀರು ಇಲ್ಲದಾಗ ಮಾತ್ರ. ಹಿಂದೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸರ್ಕಾರಗಳು ಇದ್ದಾಗ ಕಾವೇರಿ ನೀರನ್ನು ತಮಿಳುನಾಡಿಗೆ ಎಷ್ಟು ಹರಿಸಿದ್ದಾರೆಂಬ ಮಾಹಿತಿ ನೋಡಿ. ತಮಿಳುನಾಡಿನವರು ಮೊದಲಿನಿಂದಲೂ ಕೇಂದ್ರ ಸರ್ಕಾರದ ಮೇಲೆ ಪ್ರಭಾವ ಬೀರಿ ನೀರು ಬಿಡಲು ಒತ್ತಾಯಿಸುತ್ತಾರೆ. ಆದರೆ ರಾಜ್ಯದ 25 ಬಿಜೆಪಿ ಸಂಸದರು ಕಾವೇರಿ ಬಗ್ಗೆ ಧ್ವನಿ ಎತ್ತುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ ನಿರ್ಧಾರವಾಗಿಲ್ಲ. ಇಂತಹ ಸಂದರ್ಭದಲ್ಲಿ ಒಂದು ಸೌಹಾರ್ದ ಇತ್ಯರ್ಥಕ್ಕೆ ಬರುವುದೇ ಉತ್ತಮ. ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನ ಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕಾರು, ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ – ತಂದೆ, ಮಗ ಸಾವು
Web Stories