ಶಿಮ್ಲಾ: ಹಿಮಾಚಲ ಪ್ರದೇಶದ ಎಲ್ಲಾ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ವೇತನ ಸಿಗುತ್ತಿದೆ. ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹಿಮಾಚಲ ಪ್ರದೇಶದ (Himachal Pradesh) ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು (Sukhvinder Singh Sukhu) ಟ್ವಿಟ್ಟರ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
All Govt employees of Himachal Pradesh are getting paid well on time as per the schedule . A manipulated campaign is being run from Delhi to malign the image of Himachal Pradesh.
No media/news channel in Himachal is aware of any such developments, wonder who is spreading these…
— Sukhvinder Singh Sukhu (@SukhuSukhvinder) June 14, 2023
Advertisement
ರಾಜ್ಯದ ವರ್ಚಸ್ಸನ್ನು ಹಾಳುಗೆಡವಲು ದೆಹಲಿಯಲ್ಲಿ (Delhi) ಈ ಬಗ್ಗೆ ಸುಳ್ಳು ಅಭಿಯಾನ ನಡೆಯುತ್ತಿದೆ. ಹಿಮಾಚಲ ಪ್ರದೇಶದ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ವೇತನ ಸಿಗುತ್ತಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಅವರು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಆರ್ಥಿಕ ಸಂಕಷ್ಟ – 15 ಸಾವಿರ ಮಂದಿಗೆ ಇನ್ನೂ ಪಾವತಿಯಾಗಿಲ್ಲ ಸಂಬಳ
Advertisement
Advertisement
ಹಿಮಾಚಲದ ಯಾವುದೇ ಸುದ್ದಿ ವಾಹಿನಿಗಳಿಗೆ ಅಂತಹ ಮಾಹಿತಿ ತಿಳಿದಿಲ್ಲ. ಆದರೆ ದೆಹಲಿಯಲ್ಲಿ ಈ ವದಂತಿಗಳು ಹರಡುತ್ತಿರುವುದು ಅಚ್ಚರಿ ತಂದಿದೆ ಎಂದು ಅವರು ಬರೆದುಕೊಂಡಿದ್ದಾರೆ. ಇದಕ್ಕೆ ಅನೇಕರು ಪ್ರತಿಕ್ರಿಯಿಸಿದ್ದು, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Advertisement
ಹಿಮಾಚಲ ಪ್ರದೇಶದಲ್ಲಿ ಕನಿಷ್ಠ 15 ಸಾವಿರ ಸರ್ಕಾರಿ ನೌಕರರಿಗೆ ಇನ್ನೂ ಮಾಸಿಕ ವೇತನ ಪಾವತಿಯಾಗಿಲ್ಲ ಎಂಬ ಸುದ್ದಿ ಹರಿದಾಡಿತ್ತು. ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ಮೊದಲ ವಾರದಲ್ಲಿ ಸಂಬಳ ಪಾವತಿಯಾಗುತ್ತಿತ್ತು. ಆದರೆ ಅರ್ಧ ತಿಂಗಳು ಕಳೆದರೂ ವೇತನ ಪಾವತಿಯಾಗಿಲ್ಲ ಎಂದು ವರದಿಯಾಗಿತ್ತು. ಇದನ್ನೂ ಓದಿ: ಯುವಕರ ಮೈಂಡ್‍ವಾಶ್ ಮಾಡಿ ಭಯೋತ್ಪಾದನೆಗೆ ನೂಕುತಿದ್ದ ಪಿಎಫ್‍ಐ ಮುಖಂಡ ಬಳ್ಳಾರಿಯಲ್ಲಿ ಅರೆಸ್ಟ್