ಹಾಸನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆಯಾಗಿರುವ ಎರಡು ದಿನಗಳ ಅಖಿಲ ಭಾರತ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಕಲರವ ಜೋರಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಸಮ್ಮೇಳನದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಗೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನಂದಿನಿ ಚಾಲನೆ ನೀಡಿದರು. ಸಮ್ಮೇಳನದ ಸರ್ವಾಧ್ಯಕ್ಷೆ ಕೀರ್ತನಾ ನಾಯಕ್ ಅವರಿದ್ದ ಪುಷ್ಪಾಲಂಕೃತ ರಥಕ್ಕೆ ಹೇಮಾವತಿ ಪ್ರತಿಮೆ ಎದುರು ಎಸ್‍ಪಿ ಹಸಿರು ನಿಶಾನೆ ತೋರಿದರು. ಈ ಮೆರವಣಿಗೆಗಾಗಿ ನಗರದ ವಿವಿಧ ಶಾಲೆಗಳಿಂದ ಆಕರ್ಷಕ ಟ್ಯಾಬ್ಲೋಗಳನ್ನು ಸಿದ್ಧಪಡಿಸಲಾಗಿದ್ದು, ವಿವಿಧ ಮಹನೀಯರ ವೇಷ ಧರಿಸಿದ ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ.
Advertisement
Advertisement
ವಿವಿಧ ಮಕ್ಕಳ ಜಾನಪದ ಕಲಾತಂಡಗಳ ಆಕರ್ಷಕ ಪ್ರದರ್ಶನದೊಂದಿಗೆ ಸಾಗಿದ ಮೆರವಣಿಗೆ ಜನರ ಕಣ್ಮನ ಸೆಳೆಯಿತು. ಹಾಗೆಯೇ ಮೆರವಣಿಗೆ ಜೊತೆಗೆ ಸಾವಿರಾರು ಮಕ್ಕಳು ಕೂಡ ಸಭಾ ಕಾರ್ಯಕ್ರಮ ಆಯೋಜನೆಯಾಗಿರುವ ಜಿಲ್ಲಾ ಕ್ರೀಡಾಂಗಣ ತಲುಪಲಿದ್ದಾರೆ. ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಚ.ನ.ಅಶೋಕ್, ವಾರ್ತಾಧಿಕಾರಿ ವಿನೋದ್ ಚಂದ್ರ, ಕಸಾಪ ಗೌರವಾಧ್ಯಕ್ಷ ರವಿ ನಾಕಲಗೂಡು ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಸೊಬಗು ಎಲ್ಲರ ಮನ ಗೆದ್ದಿದೆ.