ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಆಸ್ಪತ್ರೆಗೆ ದಾಖಲಾಗಿದ್ದಾರೆ.
Our chairperson @MamataOfficial sustained a major injury.
Please keep her in your prayers ???????? pic.twitter.com/gqLqWm1HwE
— All India Trinamool Congress (@AITCofficial) March 14, 2024
ಮಮತಾ ಬ್ಯಾನರ್ಜಿ ಹಣೆಗೆ ಗಂಭೀರ ಗಾಯವಾಗಿದ್ದು, ರಕ್ತ ಸೋರುತ್ತಿರುವ ಚಿತ್ರವನ್ನು ತೃಣಮೂಲ ಕಾಂಗ್ರೆಸ್ (TMC) ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ.
ಮಮತಾ ಬ್ಯಾನರ್ಜಿ ಹಣೆಯಿಂದ ರಕ್ತ ಸೋರಲು ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ.
ಮಾಧ್ಯಮಗಳ ವರದಿ ಪ್ರಕಾರ ತಮ್ಮ ಮನೆಯ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಮತಾ ಬ್ಯಾನರ್ಜಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ತಕ್ಷಣವೇ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.