ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಸಂಸದೀಯ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ದೆಹಲಿಯ (New Delhi) ಅವರ 12 ತುಘಲಕ್ ಲೇನ್ ಬಂಗಲೆಯನ್ನು ಮರು ಹಂಚಿಕೆ ಮಾಡಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಅವರು ಈ ವರ್ಷದ ಏಪ್ರಿಲ್‌ನಲ್ಲಿ ಬಂಗಲೆಯನ್ನು ಖಾಲಿ ಮಾಡಿದ್ದರು. ಇದೀಗ ‘ಮೋದಿ’ ಉಪನಾಮ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಅವರ ಸಂಸದ ಸ್ಥಾನಮಾನ ಮರಳಿದ ಕಾರಣ, ಬಂಗಲೆಯನ್ನು ಅವರಿಗೆ ಮತ್ತೆ ಮಂಜೂರು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೌನ ವೃತದಲ್ಲಿರುವ ಮೋದಿ ಮಾತನಾಡಿಸಲು ಅವಿಶ್ವಾಸ ನಿರ್ಣಯ – ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಟೀಕೆ
Advertisement
Advertisement
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಮೇರಾ ಘರ್ ಪೂರಾ ಹಿಂದೂಸ್ತಾನ್ ಹೈ (ಇಡೀ ಭಾರತ ನನ್ನ ಮನೆ) ಎಂದು ಹೇಳಿದರು. 2004ರಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಲ್ಲಿ ಗೆದ್ದ ನಂತರ ರಾಹುಲ್‌ಗೆ ಮೊದಲ ಬಾರಿಗೆ ಬಂಗಲೆ ಮಂಜೂರಾಗಿತ್ತು.
Advertisement
Advertisement
12 ತುಘಲಕ್ ಲೇನ್‌ನಲ್ಲಿರುವ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಲೋಕಸಭೆಯ ವಸತಿ ಸಮಿತಿಯು ರಾಹುಲ್ ಗಾಂಧಿಗೆ ನೋಟಿಸ್ ನೀಡಿತ್ತು. ಈ ಬಗ್ಗೆ ಲೋಕಸಭೆಯ ಸೆಕ್ರೆಟರಿಯೇಟ್‌ನಲ್ಲಿನ ಉಪ ಕಾರ್ಯದರ್ಶಿ ಮೋಹಿತ್ ರಾಜನ್‌ಗೆ ಪತ್ರ ಬರೆದಿದ್ದ ರಾಹುಲ್ ಗಾಂಧಿ ತುಘಲಕ್ ಲೇನ್‌ನಲ್ಲಿರುವ ನನ್ನ ವಾಸ್ತವ್ಯವನ್ನು ರದ್ದುಗೊಳಿಸಿದ ಕುರಿತು ನಿಮ್ಮ ಪತ್ರಕ್ಕೆ ಧನ್ಯವಾದಗಳು ಎಂದು ಹೇಳಿದ್ದರು. ಇದನ್ನೂ ಓದಿ: ಅನರ್ಹತೆ ಆದೇಶ ವಾಪಸ್ ಬಳಿಕ ಮೊದಲ ಬಾರಿಗೆ ವಯನಾಡ್‌ಗೆ ಭೇಟಿ ನೀಡಲಿರುವ ರಾಗಾ
ನಾನು ಇಲ್ಲಿ ಕಳೆದ ಸಮಯದ ಸಂತೋಷದ ನೆನಪುಗಳು ಮತ್ತು ಜನರ ಆದೇಶಕ್ಕೆ ಋಣಿಯಾಗಿರುವುದಾಗಿ ಪತ್ರದಲ್ಲಿ ಹೇಳಿದ್ದರು. ಯಾವುದೇ ಪೂರ್ವಾಗ್ರಹವಿಲ್ಲದೆ, ನಾನು ಖಂಡಿತವಾಗಿಯೂ ನಿಮ್ಮ ಪತ್ರದಲ್ಲಿರುವ ವಿವರಗಳಿಗೆ ಬದ್ಧನಾಗಿರುತ್ತೇನೆ ಎಂದು ಅವರು ತಿಳಿಸಿದ್ದರು.
Web Stories