ಮುಂಬೈ: ಮಹಾರಾಷ್ಟ್ರದಲ್ಲಿ ಧ್ವನಿವರ್ಧಕದ ಗಲಾಟೆ ಮುಗಿದಿದ್ದು, ಶಾಂತಿ ನೆಲೆಸಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಶನಿವಾರ ಹೇಳಿದರು.
ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯ ಬಗ್ಗೆ ರಾಷ್ಟ್ರವ್ಯಾಪಿ ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆ ಸಂಜಯ್ ಅವರು ಕೇಂದ್ರ ಸರ್ಕಾರಕ್ಕೆ ಕರೆ ಮಾಡಿ ಈ ಕುರಿತು ಮಾತನಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಶಾಂತಿ ನೆಲೆಸಿದೆ. ಕೆಲವರು ರಾಜ್ಯದಲ್ಲಿ ಶಾಂತಿ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರಿಗೆ ತಕ್ಕ ಉತ್ತರವನ್ನು ನೀಡಲಾಗಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‍ಎಸ್) ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ವಾಗ್ದಾಳಿ ಮಾಡಿದರು.
Advertisement
Advertisement
ಹಿಂದೂ ಸಮಾಜವನ್ನು ವಿಭಜಿಸಲು ಪ್ರಯತ್ನಿಸಲಾಗುತ್ತಿದೆ. ದೇವಾಲಯಗಳು ‘ಆರತಿ'(ಪ್ರಾರ್ಥನೆ)ಗಾಗಿ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಲ್ಲಿಸಿರುವುದರಿಂದ ಸಮುದಾಯದ ಜನರು ಸಹ ಅಸಮಾಧಾನಗೊಂಡಿದ್ದಾರೆ ಎಂದರು. ಇದನ್ನೂ ಓದಿ: ಶಾಲಾ ಪಠ್ಯಕ್ರಮಗಳಲ್ಲಿ ‘ಸೈಬರ್ ಸುರಕ್ಷತೆ’ ಅಧ್ಯಯನ ಅಳವಡಿಕೆ
Advertisement
Advertisement
ವಿಲಾಸ್‍ರಾವ್ ದೇಶಮುಖ್, ಪೃಥ್ವಿರಾಜ್ ಚವಾಣ್ ಮತ್ತು ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಗಳಾಗಿದ್ದ 50 ವರ್ಷಗಳಲ್ಲಿ ಈ ಪ್ರಶ್ನೆಯನ್ನು ಏಕೆ ಎತ್ತಲಿಲ್ಲ? ಎಂದು ಪ್ರಶ್ನಿಸಿದ ಅವರು, ಎಂಎನ್‍ಎಸ್ ಮುಖ್ಯಸ್ಥರಿಗೆ ಆಗ ಧ್ವನಿವರ್ಧಕಗಳಿಂದ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ಅವರಿಗೆ ಈಗ ಈ ಸಮಸ್ಯೆ ಇದೆ. ಏಕೆಂದರೆ ಅವರ ಸಹೋದರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಕಿಡಿಕಾರಿದರು.