ಬೆಂಗಳೂರು: ದೇಶದೆಲ್ಲೆಡೆ ಕಾಂಗ್ರೆಸ್ (Congress) ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ (INDIA Alliance) ಪರವಾಗಿ ವಿಶ್ವಾಸ ಮೂಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ ಎಂದರು. ಇದನ್ನೂ ಓದಿ: ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ ನೀಡಲ್ಲ, QR Code ಪಾಸ್ ವಿತರಣೆ: ಪರಮೇಶ್ವರ್
ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಜನರಿಗೆ ವಿವರಿಸಿದ್ದೇವೆ. ಜನರು ನಮ್ಮ ಯೋಜನೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.
ಅಧಿಕಾರಿಗಳ ಜೊತೆ ನಡೆದ ಸಭೆ ಬಗ್ಗೆ ಕೇಳಿದಾಗ, ಬರಗಾಲ, ಕುಡಿಯುವ ನೀರು, ಮೇವಿನ ಸಮಸ್ಯೆ ಮತ್ತಿತರ ವಿಚಾರಗಳ ಬಗ್ಗೆ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ಮಾಡಿದ್ದೇವೆ. ಬೆಂಗಳೂರಿನಲ್ಲಿ ಮಳೆ ಪರಿಣಾಮ ಕುರಿತು ಪ್ರತ್ಯೇಕ ಸಭೆ ಮಾಡುತ್ತೇನೆ. ಬತ್ತಿ ಹೋಗಿರುವ ಕೆರೆಗಳಿಗೆ ಪರಿಷ್ಕರಿಸಿದ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಪಿಂಚಣಿ, ನರೇಗಾ ಹಣ ಸಾಲ ಮರುಪಾವತಿಗೆ ಹೊಂದಿಸದಂತೆ ʼಕೈʼ ಸರ್ಕಾರ ಆದೇಶ ನೀಡಲಿ: ಅಶೋಕ್ ಆಗ್ರಹ