ನಿಗದಿತ ಸಮಯಕ್ಕೆ ಚುನಾವಣೆ ನಡೆಸುವಂತೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ: ಸುಶೀಲ್ ಚಂದ್ರ

Public TV
2 Min Read
Election 2

ಲಕ್ನೋ: ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಮುಂದೂಡುವುದಿಲ್ಲ, ಬದಲಿಗೆ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.

ELECTION COMMISNERSushil Chandra

ದೇಶದ್ಯಾಂತ ಓಮಿಕ್ರಾನ್ ಸೋಂಕು ಹರಡುವಿಕೆ ತೀವ್ರವಾಗುತ್ತಿರುವ ಹಿನ್ನಲೆ ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡಿಕೆಗೆ ಕೇಳಿ ಬಂದ ಒತ್ತಡಕ್ಕೆ ಇಂದು ಸುದ್ದಿಗೋಷ್ಠಿಯಲ್ಲಿ ಆಯೋಗದ ತಿರ್ಮಾನ ತಿಳಿಸಿದರು. ಇದನ್ನೂ ಓದಿ: ರಿಕ್ಷಾ ಕೊಡಿಸೆಂದು ತಾಯಿ ಜೊತೆ ಜಗಳವಾಡ್ತಿದ್ದವ ಸಹೋದರನಿಂದ್ಲೇ ಕೊಲೆಯಾದ!

bjp cng

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಗ ಚುನಾವಣೆಗಳನ್ನು ಮುಂದೂಡುತ್ತಿಲ್ಲ. ಎಲ್ಲ ರಾಜಕೀಯ ಪಕ್ಷಗಳು ಆಯೋಗವನ್ನು ಭೇಟಿ ಮಾಡಿ ಸರಿಯಾದ ಸಮಯಕ್ಕೆ ಚುನಾವಣೆ ನಡೆಸಲು ಮನವಿ ಮಾಡಿವೆ. ಈ ಹಿನ್ನಲೆಯಲ್ಲಿ ಎಲ್ಲ ರೀತಿಯ ಕೊವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಅಳವಡಿಸುವ ಮೂಲಕ ಚುನಾವಣೆಯನ್ನು ನಡೆಸಲಾಗುವುದು. ಜನವರಿ 5 ರಂದು ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು, ಚುನಾವಣಾ ಸಮಿತಿಯು ಮುಂದಿನ ವರ್ಷದ ಚುನಾವಣೆಯ ವೇಳಾಪಟ್ಟಿಯನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ, ಮತದಾನದ ದಿನಾಂಕದಂದು ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಎಲ್ಲಾ ಮತಗಟ್ಟೆಗಳಲ್ಲಿ ವಿವಿಪ್ಯಾಟ್‍ಗಳನ್ನು ಅಳವಡಿಸಲಾಗುವುದು, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಸುಮಾರು 1 ಲಕ್ಷ ಮತಗಟ್ಟೆಗಳಲ್ಲಿ ಲೈವ್ ವೆಬ್‍ಕಾಸ್ಟಿಂಗ್ ಸೌಲಭ್ಯಗಳು ಲಭ್ಯವಿರುತ್ತವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಆಡಳಿತ ಪಕ್ಷವನ್ನು ತೊಲಗಿಸಬೇಕು ಅಂತ ಜನ ಭಾವಿಸಿದ್ದಾರೆ: ಸಿದ್ದರಾಮಯ್ಯ

80 ವರ್ಷಕ್ಕಿಂತ ಮೇಲ್ಪಟ್ಟ ಜನರು, ಅಂಗವಿಕಲರು ಮತ್ತು ಕೋವಿಡ್ ಪೀಡಿತ ಜನರು ಮತಗಟ್ಟೆಗೆ ಬರಲು ಸಾಧ್ಯವಾಗದಿದ್ದರೆ, ಚುನಾವಣಾ ಆಯೋಗವು ಅವರ ಮನೆ ಬಾಗಿಲಿಗೆ ತಲುಪುತ್ತದೆ, ಚುನಾವಣಾ ನೀತಿ ಸಂಹಿತೆಗಳನ್ನು ಆಯೋಗ ಕಟ್ಟುನಿಟ್ಟಾಗಿ ಜಾರಿಗೆ ತರಲಿದೆ ಎಂದು ಸುಶೀಲ್ ಚಂದ್ರ ತಿಳಿಸಿದರು.

624592 election commission

ಇದಕ್ಕೂ ಮುನ್ನ ಬುಧವಾರ, ಆಯೋಗದ ನಿಯೋಗವು ಜಿಲ್ಲಾಧಿಕಾರಿಗಳು, ಪೊಲೀಸ್ ಮುಖ್ಯಸ್ಥರು, ಆಯುಕ್ತರು, ಐಜಿಗಳು, ಡಿಐಜಿಗಳು ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿತು. ಮಂಗಳವಾರ ಉತ್ತರ ಪ್ರದೇಶದ ರಾಷ್ಟ್ರೀಯ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿತ್ತು. ಇದನ್ನೂ ಓದಿ: ರಾಜ್ಯದ 58 ಪುರಸಭೆ, 57 ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು

ಕಳೆದ ಸೋಮವಾರ, ಕೇಂದ್ರ ಚುನಾವಣಾ ಆಯೋಗವು ದೆಹಲಿಯಲ್ಲಿ ಹಿರಿಯ ಆರೋಗ್ಯ ಸಚಿವಾಲಯದ ಅಧಿಕಾರಿಗಳೊಂದಿಗೆ ಓಮಿಕ್ರಾನ್ ಬೆದರಿಕೆ ಮತ್ತು ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಸುರಕ್ಷಿತವಾಗಿ ಚುನಾವಣೆ ನಡೆಸಲು ಅಗತ್ಯವಾದ ಕ್ರಮಗಳ ಕುರಿತು ಸಭೆ ನಡೆಸಿತ್ತು. ನಂತರ, ಕೇಂದ್ರ ಸರ್ಕಾರವು ಕೋವಿಡ್ ಲಸಿಕೆಯನ್ನು ಹೆಚ್ಚಿಸಲು, ಮಾದರಿ ಪರೀಕ್ಷೆಗಳನ್ನು ಹೆಚ್ಚಿಸಲು ಮತ್ತು ಕೋವಿಡ್ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚುನಾವಣೆಗೆ ಒಳಪಡುವ ರಾಜ್ಯಗಳಿಗೆ ಸಲಹೆ ನೀಡಿತು.

Share This Article
Leave a Comment

Leave a Reply

Your email address will not be published. Required fields are marked *