ಬೆಂಗಳೂರು: ಜು.12ರ ಭಾನುವಾರದಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಾಹಿತಿ ನೀಡಿದೆ.
ರಾಜ್ಯಾದ್ಯಂತ ಇರುವ ಎಲ್ಲಾ ಉಪನೋಂದಣಿ ಕಚೇರಿಗಳು (Sub-Registrar Offices) ಇದೇ ಭಾನುವಾರ (ಜು.12) ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ. ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಇದನ್ನೂ ಓದಿ: ಶಾಶ್ವತ ವಾಸಸ್ಥಳ ಪ್ರಮಾಣಪತ್ರಕ್ಕೆ ವಿರೋಧ – ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ
ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ವಿಶೇಷ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
