ಹೈದರಾಬಾದ್: 2022-23ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ಶಿಕ್ಷಣ ಪರಿಚಯಿಸಲು ಹಾಗೂ ಖಾಸಗಿ ಶಾಲೆಗಳು, ಜೂನಿಯರ್ ಮತ್ತು ಪದವಿ ಕಾಲೇಜುಗಳ ಶುಲ್ಕ ನಿಯಂತ್ರಿಸಲು ತೆಲಂಗಾಣ ಸರ್ಕಾರ ಸಂಪುಟ ನಿರ್ಧರಿಸಿದೆ.
ಸೋಮವಾರ ಕರೆದಿದ್ದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಶಿಕ್ಷಣ ಸಚಿವೆ ಸುಬಿತಾ ಇಂದ್ರ ರೆಡ್ಡಿ ನೇತೃತ್ವದಲ್ಲಿ ಸಚಿವರ ಉಪಸಮಿತಿಯನ್ನು ಸಂಪುಟ ರಚಿಸಿದ್ದು, ಈ ವಿಷಯಗಳ ಕುರಿತು ಅಧ್ಯಯನ ಮತ್ತು ಮಾರ್ಗಸೂಚಿಗಳನ್ನು ಸಿದ್ಧಪಡಿಸಿದೆ. ಇದನ್ನೂ ಓದಿ: UP Election- 30 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
Advertisement
Advertisement
ಸಭೆಯಲ್ಲಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಮೂಲಸೌಕರ್ಯ ಮತ್ತು ಗುಣಮಟ್ಟದ ಶಿಕ್ಷಣ ಒದಗಿಸಲು 7,289 ಕೋಟಿ ವೆಚ್ಚದ `ಮನ ವೂರು ಮನ ಬಡಿ’ (ನಮ್ಮ ಊರು-ನಮ್ಮ ಶಾಲೆ) ಯೋಜನೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ.
Advertisement
ಬೋಧನಾ ಮಾಧ್ಯಮ ಇಂಗ್ಲಿಷ್‌ನಲ್ಲಿದ್ದರೆ ಗ್ರಾಮೀಣ ಪ್ರದೇಶದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಸಿದ್ಧರಿದ್ದಾರೆ ಎಂದು ಸಚಿವ ಸಂಪುಟ ಅಭಿಪ್ರಾಯಪಟ್ಟಿದೆ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಅನ್ನು ಬೋಧನಾ ಮಾಧ್ಯಮವಾಗಿ ಮಾಡಲು ಮತ್ತು ಅದಕ್ಕೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸಂಪುಟ ನಿರ್ಧರಿಸಿದೆ. ಇದನ್ನೂ ಓದಿ: ಯುಪಿಯಲ್ಲಿ ಬಿಜೆಪಿ ಗೆದ್ರೆ, ಯೋಗಿ ಮತ್ತೊಮ್ಮೆ ಸಿಎಂ ಆದ್ರೆ ಸೃಷ್ಟಿಯಾಗಲಿದೆ ಹೊಸ ನಾಲ್ಕು ದಾಖಲೆಗಳು!
Advertisement
ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ನಲ್ಲಿ ಬೋಧಿಸಲು ಶಿಕ್ಷಕರಿಗೆ ತರಬೇತಿ ನೀಡಲು, ಶಾಲೆಗಳ ಪರಿಸರವನ್ನು ಮಕ್ಕಳಿಗೆ ಆಕರ್ಷಕವಾಗಿಸಲು, ಆವರಣವನ್ನು ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇರಿಸಲು, ಮಧ್ಯಾಹ್ನದ ಊಟವನ್ನು ಸುಧಾರಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಸರ್ಕಾರ ನಿರ್ಧರಿಸಿದೆ.