ನವದೆಹಲಿ: ನಾವು ಸಂವಿಧಾನವನ್ನು ರಕ್ಷಿಸಬೇಕು. ಸಂವಿಧಾನ ಉಳಿಸಲು, ನಾವು ನಮ್ಮ ಸಂಸ್ಥೆಗಳನ್ನು ರಕ್ಷಿಸಬೇಕು. ಆದರೆ ಎಲ್ಲ ಸಂಸ್ಥೆಗಳೂ ಈಗ ಆರ್‌ಎಸ್‌ಎಸ್ ಹಿಡಿತದಲ್ಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನಗರದಲ್ಲಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಅಧಿಕಾರದ ಆಸೆಗೆ ಬಿದ್ದ ರಾಜಕಾರಣಿಗಳೂ ಇದ್ದಾರೆ. ಅವರು ಪೂರ್ತಿಯಾಗಿ ಅಧಿಕಾರವನ್ನು ಪಡೆಯುವ ಬಗ್ಗೆ ಯೋಚಿಸುತ್ತಾರೆ. ನಾನು ಅಧಿಕಾರದ ಕೇಂದ್ರದಲ್ಲಿ ಹುಟ್ಟಿದ್ದೇನೆ. ಆದರೆ ನನಗೆ ಅದರಲ್ಲಿ ಆಸಕ್ತಿ ಇಲ್ಲ. ಬದಲಿಗೆ ನಾನು ದೇಶವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ
ಮಾಯಾವತಿ ಅವರು ಉತ್ತರ ಪ್ರದೇಶ ಚುನಾವಣೆಯಲ್ಲಿ ಹೋರಾಡಲಿಲ್ಲ. ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ನಾವು ಮಾಯಾವತಿ ಕೇಳಿದ್ದೆವು. ಆದರೆ ಅವರು ಸ್ಪಂದಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ದಲಿತರ ಏಳಿಗೆಗಾಗಿ ಕಾನ್ಸಿರಾಮ್ ಜಿ ಅವರು ಧ್ವನಿ ಎತ್ತಿದ್ದರು. ಆದರೆ ಅದು ಕಾಂಗ್ರೆಸ್ ಮೇಲೆ ಪರಿಣಾಮ ಬೀರಿತ್ತು. ಈಗ ಮಾಯಾವತಿಯವರು ದಲಿತರ ಧ್ವನಿಯಾಗಿ ಹೋರಾಡಲಿಲ್ಲ. ಏಕೆಂದರೆ ಸಿಬಿಐ, ಇಡಿ, ಪೆಗಾಸಸ್ ಭಯದಲ್ಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುಪಿ ಸಿಎಂ ಕಚೇರಿಯ ಟ್ವಿಟ್ಟರ್ ಖಾತೆ ಹ್ಯಾಕ್