ಮೈಸೂರು: ನನ್ನ 37 ವರ್ಷದ ರಾಜಕೀಯ ಜೀವನದ ಎದುರಾಳಿಗಳು ಈಗ ನಮ್ಮ ಮುಂದೆ ಇಲ್ಲ. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡುವುದಕ್ಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ. ನನಗೆ ಬುದ್ದಿ ಹೇಳಿ ಸರಿ ದಾರಿ ತೋರಿದವರೂ ಇದ್ದಾರೆ, ಖ್ಯಾತೆ ತೆಗೆದು ಕಣ್ಮರೆಯಾದವರೂ ಇದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಶಾಸಕ ಸಿ.ಎಸ್ ಪುಟ್ಟರಾಜು ಆಕ್ರೋಶ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪುಟ್ಟರಾಜು ಅವರು, 1983ರಲ್ಲೇ ನಾನು ಸಕ್ರಿಯವಾಗಿ ರಾಜಕೀಯಕ್ಕೆ ಬಂದವನು. ಗಣಿಗಾರಿಕೆ ವಿಚಾರದಲ್ಲಿ ಯಾರೇ ಅಕ್ರಮ ಮಾಡಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಿ. ಆದರೆ ಸಕ್ರಮ ಇರುವ ಕ್ರಷರ್ ಗಳನ್ನು ಅಭಿವೃದ್ಧಿ ದೃಷ್ಟಿಯಿಂದ ಆರಂಭಿಸಬೇಕು. ಈ ಬಗ್ಗೆ ದಿಶಾ ಮೀಟಿಂಗ್ ನಲ್ಲಿ ಚರ್ಚೆ ಮಾಡಿದ್ದೇವೆ. ಅಕ್ರಮ ಗಣಿಗಾರಿಕೆ ಎಂದು ಎರಡು ತಿಂಗಳಿಂದ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಹಾಗಾಗಿ ದಿಶಾ ಸಭೆಯಲ್ಲಿ ಜಿಲ್ಲೆ ಅಭಿವೃದ್ಧಿಗೆ ಒತ್ತು ನೀಡುವಂತೆ ತೀರ್ಮಾನ ಮಾಡಲಾಗಿದೆ. ಕಾನೂನು ಚೌಕಟ್ಟಿನಲ್ಲೇ ಎಲ್ಲರೂ ಒಟ್ಟಾಗಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ
ನನಗೆ ಎಸ್.ಎಂ ಕೃಷ್ಣ ರಂತಹ ಮುಖ್ಯಮಂತ್ರಿ ಇಷ್ಟ. ಎಸ್.ಎಂ ಕೃಷ್ಣ ಅವರು ರಾಜ್ಯದ ಸಿಎಂ ಆಗಿದ್ದಾಗ ಕೈಗಾರಿಕೆ ಬೆಳವಣಿಗೆಗೆ ಉತ್ತೇಜನ ನೀಡಿದ್ದರು. ಕೃಷ್ಣ ಅವರ ಮುಂದಾಲೋಚನೆ ಕೆಲಸಗಳನ್ನು ಫಾಲೋ ಮಾಡಬೇಕು. ಆದರೂ ನಾನು ಎಲ್ಲ ಮುಖ್ಯಮಂತ್ರಿಗಳಿಗಿಂತ ಎಸ್.ಎಂ ಕೃಷ್ಣ ಅವರನ್ನು ಬಹಳ ಇಷ್ಟ ಪಡುತ್ತೇನೆ. ಅವರ ಕಾರ್ಯವೈಖರಿ ನನಗೆ ವೈಯಕ್ತಿಕವಾಗಿ ಇಷ್ಟ ಎಂದು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ಜನಸ್ತೋಮ – ಇಂದು ಸೇರಿದಂತೆ 3 ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ