ಬೆಂಗಳೂರು: ಚನ್ನಪಟ್ಟಣದಲ್ಲಿ (Channapatna) ರಣರಂಗ ಆಡಿದವರೆಲ್ಲಾ ಮುಗಿದು ಹೋಗಿದ್ದಾರೆ. ನಾವು ಮಾಡಿದ ಕೆಲಸಕ್ಕೆ ಪಟ್ಟಿ ಹಾಕಿ ಚನ್ನಪಟ್ಟಣದ ಜನ ಮಾರ್ಕ್ಸ್ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಚನ್ನಪಟ್ಟಣ ಪ್ರಚಾರದ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣದಲ್ಲಿ ಯಾವ ರಣನೂ ಇಲ್ಲ, ರಂಗವೂ ಇಲ್ಲ. ಮತದಾರನ ಹೃದಯ ಗೆಲ್ಲಬೇಕು. ನಾವು ಮಾಡಿರುವ ಕೆಲಸಕ್ಕೆ, ಮಾಡುತ್ತಿರುವ ಕೆಲಸಕ್ಕೆ ಜನ ಗುರುತಿಸಿ ಎಂದು ಕೇಳಲು ಹೋಗುತ್ತಿದ್ದೇವೆ. ರಣರಂಗ ಆಡಿದವರೆಲ್ಲ ಮುಗಿದು ಹೋಗಿದ್ದಾರೆ. ಈಗ ಏನಿದ್ದರೂ ಜನರ ಲಾಭ ಮಾತ್ರ ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ಟಾಂಗ್ ಕೊಟ್ರು. ಇದನ್ನೂ ಓದಿ: ವಿಶ್ವಗುರು ಬಸವಣ್ಣರನ್ನೇ ಕತ್ತಲೆಗೆ ದೂಡಿದ ಬಿಬಿಎಂಪಿ – ನಿರ್ವಹಣೆ ಇಲ್ಲದೇ ಉದುರುತ್ತಿದೆ ಪುತ್ಥಳಿ ಬಣ್ಣ!
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾಯಕ ಆದವನು ಮತದಾರರಿಗೆ ಏನು ಕೊಡುತ್ತಾನೆ, ಯಾವ ರೀತಿ ಸಹಾಯ ಮಾಡುತ್ತಾನೆ ಅವರ ಬದುಕನ್ನು ಯಾವ ರೀತಿ ಬದಲಾವಣೆ ಮಾಡುತ್ತಾನೆ ಅದು ಬಹಳ ಮುಖ್ಯ. ಯಾರು ಏನೇನು ಮಾಡಿದ್ದಾರೆ ಅನ್ನೋ ಪಟ್ಟಿ ಈ ಚುನಾವಣೆಯಲ್ಲಿ ಲೆಕ್ಕಕ್ಕೆ ಬರುತ್ತದೆ. ಜನ ತೀರ್ಮಾನ ಮಾಡುತ್ತಾರೆ. ಡಿಕೆ ಸುರೇಶ್, ಡಿಕೆ ಶಿವಕುಮಾರ್, ಕುಮಾರಸ್ವಾಮಿ, ಯೋಗೇಶ್ವರ್ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಜನರು ಪಟ್ಟಿ ಹಾಕುತ್ತಾರೆ. ಅದು ಬಿಟ್ಟರೆ ಯಾವ ರಣನೂ ಇಲ್ಲ, ರಂಗನೂ ಇಲ್ಲ ಏನು ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: Bengaluru Traffic Jam: ರಜೆ ಮುಗಿಸಿ ಬೆಂಗಳೂರಿನತ್ತ ಜನ, ಎಲ್ಲೆಲ್ಲೂ ಜಾಮ್ ಜಾಮ್!
ಇನ್ನು ಚನ್ನಪಟ್ಟಣದಲ್ಲಿ ಬಿಜೆಪಿ ನಾಯಕರಿಂದ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಸಾಥ್ ಕೊಟ್ಟಿರೋದು ಒಳ್ಳೆಯದು ಅಲ್ಲವಾ. ಬಿಜೆಪಿ ಪಾದಯಾತ್ರೆಗಂತೂ ಜೆಡಿಎಸ್ ಅವರು ಸಾಥ್ ಕೊಟ್ಟಿರಲಿಲ್ಲ. ಆದರೂ ಜೆಡಿಎಸ್‌ಗೆ ಬಿಜೆಪಿ ಅವರು ಸಾಥ್ ಕೊಡುತ್ತಿದ್ದಾರೆ, ಕೊಡಲಿ ಎಂದು ಬಿಜೆಪಿ ನಾಯಕರಿಗೆ ತಿವಿದರು. ಇದನ್ನೂ ಓದಿ: ರಾಜಕೀಯ ಏನಾದ್ರೂ ಇರಲಿ, ಜಯನಗರಕ್ಕೆ ಅನುದಾನ ಕೊಡಿ – ಡಿಕೆಶಿಗೆ ಸೆಲೆಬ್ರಿಟಿಗಳ ಮನವಿ