ಲಕ್ನೋ: 2007ರ ಗೋರಖ್‍ಪುರ ಗಲಭೆ ಪ್ರಕರಣಕ್ಕೆ (Gorakhpur Riot Case) ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ವಿರುದ್ಧ ಪದೇ ಪದೇ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬನಿಗೆ ಅಲಹಾಬಾದ್ ಹೈಕೋರ್ಟ್ (Allahabad High Court) 1 ಲಕ್ಷ ರೂ. ದಂಡ ವಿಧಿಸಿದೆ.
2007ರ ಜ. 27ರಂದು ಗೋರಖ್‍ಪುರದಲ್ಲಿ ಮೊಹರಂ ಮೆರವಣಿಗೆಯ ಸಂದರ್ಭದಲ್ಲಿ 2 ಗುಂಪುಗಳ ನಡುವಿನ ಘರ್ಷಣೆಯಲ್ಲಿ ಓರ್ವ ವ್ಯಕ್ತಿಯ ಹತ್ಯೆಯಾಗಿತ್ತು. ಘಟನೆಗೆ ಸಂಬಂಧಿಸಿ ಪತ್ರಕರ್ತ ಪರ್ವೇಜ್ ಪರ್ವಾಜ್ ಅವರು 2008ರ ಸೆ. 26ರಂದು ದೂರು ಸಲ್ಲಿಸಿದ್ದರು. ಯೋಗಿ ಆದಿತ್ಯನಾಥ್ ಅವರು ಯುವಕನ ಸಾವಿಗೆ ಪ್ರತಿಕಾರ ತೀರಿಸಿಕೊಳ್ಳುವ ದ್ವೇಷದ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು.
Advertisement
Advertisement
ಕಾನೂನು ಕ್ರಮವನ್ನು ತೆಗೆದುಕೊಳ್ಳಲು ರಾಜ್ಯ ಸರ್ಕಾರ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಪರ್ವೇಜ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಅಲಹಾಬಾದ್ ಹೈಕೊರ್ಟ್‍ಗೆ ಅರ್ಜಿ ಸಲ್ಲಿಸಿದರು. ಆದರೆ ಆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಹೈಕೋರ್ಟ್‍ನ ತೀರ್ಪನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಿದರು. ಆದರೆ ಅಲ್ಲಿಯೂ ಸಹ ವಜಾಗೊಳಿಸಲಾಯಿತು. ಇದನ್ನೂ ಓದಿ: ಯೋಧರಿಗೆ ಆಹಾರ ನೀಡಲು ಒದ್ದಾಡುತ್ತಿದೆ ಪಾಕ್!
Advertisement
ಪರ್ವೇಜ್ 2022ರ ಅ. 11ರ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ್ದರು. ಇದರಲ್ಲಿ ನ್ಯಾಯಾಲಯವು ಗಲಭೆ ಪ್ರಕರಣದಲ್ಲಿ ಪೊಲೀಸರ ಅಂತಿಮ ವರದಿಯ ವಿರುದ್ಧದ ಪ್ರತಿಭಟನಾ ಅರ್ಜಿಯನ್ನು ತಿರಸ್ಕರಿಸಿತ್ತು.
Advertisement
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈಗಾಗಲೇ ಸುಪ್ರೀಂ ಕೋರ್ಟ್‍ನಲ್ಲಿ ಪ್ರಕರಣ ಇತ್ಯರ್ಥವಾಗಿದೆ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿ 1 ಲಕ್ಷ ರೂ. ದಂಡವನ್ನು ವಿಧಿಸಿದೆ. ಇದನ್ನೂ ಓದಿ: ಕಂಠಪೂರ್ತಿ ಕುಡಿದು ಬಸ್‌ನಲ್ಲಿ ಯುವತಿಯ ಸೀಟ್ ಮೇಲೆ ಮೂತ್ರವಿಸರ್ಜನೆ ಮಾಡಿದ ಭೂಪ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k