ಬಿಜೆಪಿ ವಿರುದ್ಧ 50% ಕಮಿಷನ್ ಆರೋಪ – ಪ್ರಿಯಾಂಕಾ ಗಾಂಧಿ ವಿರುದ್ಧ ಪ್ರಕರಣ ದಾಖಲು

Public TV
2 Min Read
Priyanka Gandhi Vadra

ಭೋಪಾಲ್: ಮಧ್ಯಪ್ರದೇಶದ ಬಿಜೆಪಿ (Madhya Pradesh BJP) ವಿರುದ್ಧ 50% ಕಮಿಷನ್ (Commission) ಆರೋಪ ಮಾಡಿರುವ ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra), ಸಂಸದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹಾಗೂ ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ‘ಎಕ್ಸ್’ (ಟ್ವಿಟ್ಟರ್) ಖಾತೆಗಳ ಹ್ಯಾಂಡ್ಲರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಂದೋರ್ ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಆಗಿರುವ ಎಕ್ಸ್‌ನಲ್ಲಿ ಜ್ಞಾನೇಂದ್ರ ಅವಸ್ತಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ನಕಲಿ ಪತ್ರವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ದೂರು ನೀಡಿರುವುದಾಗಿ ಇಂದೋರ್ ಪೊಲೀಸ್ ಕಮಿಷನರ್ ಶನಿವಾರ ತಡರಾತ್ರಿ ಹೇಳಿದ್ದಾರೆ. ಪತ್ರದಲ್ಲಿ 50% ಕಮಿಷನ್ ನೀಡುವಂತೆ ರಾಜ್ಯದ ಗುತ್ತಿಗೆದಾರರಿಗೆ ಕೇಳಲಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ.

Priyanka Gandhi

ಶುಕ್ರವಾರ ಪ್ರಿಯಾಂಕಾ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಅದರಲ್ಲಿ, ಮಧ್ಯಪ್ರದೇಶದ ಗುತ್ತಿಗೆದಾರರ ಒಕ್ಕೂಟ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದೆ. ಅವರು 50% ಕಮಿಷನ್ ಪಾವತಿಸಿದ ನಂತರವೇ ಪಾವತಿಯನ್ನು ಸ್ವೀಕರಿಸುತ್ತಾರೆ ಎಂದು ದೂರಿದ್ದರು. ಇದನ್ನೂ ಓದಿ: ಟೊಮೆಟೋ ಬಳಿಕ ಬಾಳೆಹಣ್ಣಿಗೆ ಬಂಗಾರದ ಬೆಲೆ- 1 ಕೆಜಿ ಏಲಕ್ಕಿ ಬಾಳೆ 80 ರೂ.ಗೆ ಮಾರಾಟ

ಕರ್ನಾಟಕದ ಭ್ರಷ್ಟ ಬಿಜೆಪಿ ಸರ್ಕಾರ 40% ಕಮಿಷನ್ ಸಂಗ್ರಹಿಸುತ್ತಿತ್ತು. ಮಧ್ಯಪ್ರದೇಶದಲ್ಲಿ ಬಿಜೆಪಿ ಭ್ರಷ್ಟಾಚಾರದ ತನ್ನದೇ ದಾಖಲೆಯನ್ನು ಮುರಿದಿದೆ. ಕರ್ನಾಟಕದ ಜನರು 40% ಕಮಿಷನ್ ಸರ್ಕಾರವನ್ನು ಕಿತ್ತೊಗೆದಿದ್ದಾರೆ. ಈಗ ಮಧ್ಯಪ್ರದೇಶದ ಜನರು 50% ಕಮಿಷನ್ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ ಎಂದು ಬರೆದಿದ್ದರು.

ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಪೋಸ್ಟ್ ಮಾಡಿರುವ ವಿಚಾರವಾಗಿ ಸಂಸದ ನರೋತ್ತಮ್ ಮಿಶ್ರಾ, ಈ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ. ಈ ಆರೋಪಗಳಿಗೆ ಸಾಕ್ಷಿಗಳನ್ನು ನೀಡಿ, ಇಲ್ಲದೇ ಹೋದರೆ ಸೂಕ್ತ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಹಾಗೂ ಬಿಜೆಪಿಯ ಮುಂದೆ ಆಯ್ಕೆಗಳಿವೆ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ನನ್ನ 19 ವರ್ಷಗಳ ರಾಜಕೀಯ ಜೀವನದಲ್ಲಿ ಮಣಿಪುರದಂಥ ಘೋರ ಅನುಭವ ಎಂದೂ ಆಗಿಲ್ಲ: ರಾಹುಲ್‌ ಗಾಂಧಿ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article