– ಪುತ್ತಿಲ ಪರಿವಾರದವನ ಮೇಲೆ ತಲವಾರ್ ದಾಳಿಗೆ ಯತ್ನ ಆರೋಪ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur) ಪುತ್ತಿಲ ಪರಿವಾರ – ಹಿಂದೂ ಜಾಗರಣ ವೇದಿಕೆ ಮುಖಂಡರ ಮಧ್ಯೆ ಸಂಘರ್ಷ ನಡೆದಿದೆ.
ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರ ಕಚೇರಿಗೆ ಹಿಂದೂ ಜಾಗರಣ ವೇದಿಕೆ ಮುಖಂಡರು ನುಗ್ಗಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪುತ್ತಿಲ ಪರಿವಾರದ ಮನೀಶ್ ಕುಲಾಲ್ ಮೇಲೆ ಹಿಂಜಾವೇ ದಿನೇಶ್ ಪಂಜಿಗ ತಂಡ ತಲ್ವಾರ್‍ನಲ್ಲಿ ಹಲ್ಲೆ ಮಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ದಿನೇಶ್ ಪಂಜಿಗ ಸೇರಿ 8 ಜನರಿದ್ದ ತಂಡದ ಮೇಲೆ ಈ ಆರೋಪ ಕೇಳಿಬಂದಿದೆ. ಸದ್ಯ ತಲ್ವಾರ್ ತೋರಿಸಿದ ದಿನೇಶ್ ಪಂಜಿಗನನ್ನ ಪುತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕೆಇಎ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‍ಪಿನ್ ಆರ್‌ಡಿ ಪಾಟೀಲ್ ಅರೆಸ್ಟ್
ತಲ್ವಾರ್ ಕಾಳಗದ ಹಿಂದೆ ಫೇಸ್ ಬುಕ್ ನಲ್ಲಿ ಹಾಕಿದ ಒಂದು ಪೋಸ್ಟ್ ಕಾರಣ ಎಂಬ ಮಾಹಿತಿ ಸಿಕ್ಕಿದೆ. ಒಟ್ಟಿನಲ್ಲಿ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಹಿಂದೂ ಜಾಗರಣ ವೇದಿಕೆ ಹಾಗೂ ಪುತ್ತಿಲ ಪರಿವಾರದ ಕಾರ್ಯಕರ್ತರು ಪುತ್ತೂರು ಠಾಣೆ ಎದುರು ಜಮಾಯಿಸಿದರು.