-ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಪತ್ತೆ
ಬೆಂಗಳೂರು: ಭ್ರಷ್ಟಾಚಾರ (Corruption) ಆರೋಪದ ಹಿನ್ನೆಲೆ ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta) ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದಾರೆ. 4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳಿಗೆ ಏಕಾಏಕಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ನಗರ ಯೋಜನಾ ಘಟಕದ ನಿರ್ದೇಶಕ ತಿಪ್ಪೇಸ್ವಾಮಿ ನಿವಾಸ ಹಾಗೂ ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ತಿಪ್ಪೇಸ್ವಾಮಿ ಪತ್ನಿಯ ತವರು ಮನೆಯಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಕುದರೆ ಗ್ರಾಮದ ಮನೆಯಲ್ಲಿ ಲೋಕಾ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ದಾವಣಗೆರೆ ಲೋಕಾಯುಕ್ತ ಇನ್ಸ್ ಪೆಕ್ಟರ್ ಪ್ರಭು ನೇತ್ರತ್ವದಲ್ಲಿ ಶೋಧ ನಡೆಯುತ್ತಿದೆ. ಅಲ್ಲದೆ ಮಾವನ ಮನೆಯಲ್ಲಿ ತಿಪ್ಪೇಸ್ವಾಮಿ ಅವರಿಗೆ ಸೇರಿದ ಆಸ್ತಿ ದಾಖಲೆಗಳು ಏನಾದರೂ ಸಿಗಬಹುದು ಎಂದು ಲೋಕಾ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹ- ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ತಿಪ್ಪೇಸ್ವಾಮಿಯವರ ಬೆಂಗಳೂರು ನಿವಾಸದ ಮೇಲೂ ದಾಳಿ ಮಾಡಲಾಗಿದೆ. ಗಿರಿನಗರದಲ್ಲಿ ಇರುವ ಬಂಗಲೆಗೆ ಎಸ್‌ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಬಂಗಲೆಯಲ್ಲಿ ಪರಿಶೀಲನೆ ನಡೆಯುತ್ತಿದೆ. ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನ ಪತ್ತೆಯಾದ ಹಿನ್ನೆಲೆಯಲ್ಲಿ ಚಿನ್ನಾಭರಣ ತೂಕ ಹಾಕಲು ಲೋಕಾ ಅಧಿಕಾರಿಗಳು ತಿಪ್ಪೇಸ್ವಾಮಿ ಮನೆಗೆ ಅಕ್ಕಸಾಲಿಗನನ್ನು ಕರೆಸಿದ್ದಾರೆ. ಇದನ್ನೂ ಓದಿ: Kalaburagi| ಒಂದೇ ರಾತ್ರಿ 6 ಮನೆ ಕಳ್ಳತನ- 4.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಅಕ್ರಮ ಆಸ್ತಿ ಸಂಪಾದನೆ ದೂರು ಬಂದ ಹಿನ್ನೆಲೆ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು, ಬೆಂಗಳೂರು, ಮಂಡ್ಯದ ಮಳವಳ್ಳಿಯಲ್ಲಿ ಇರುವ ಮಹೇಶ್ ಒಡೆತನದ ಮನೆಗಳು ಹಾಗೂ ಸಂಬಂಧಿಕರ ಮನೆಗಳ ಮೇಲೆ ಏಕಾಏಕಿ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದಾರೆ. ಜೊತೆಗೆ ಕೆಆರ್‌ಎಸ್‌ನಲ್ಲಿ ಇರುವ ಮಹೇಶ್ ಪತ್ನಿ ಮಾಲೀಕತ್ವದ ಪೆಟ್ರೋಲ್ ಬಂಕ್ ಮೇಲೂ ದಾಳಿ ನಡೆದಿದೆ. ದಾಳಿ ವೇಳೆ ಒಂದಷ್ಟು ದಾಖಲೆಗಳು, ನಗದು ಹಾಗೂ ಚಿನ್ನಾಭರಣಗಳು ಸಿಕ್ಕಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೂಡಲೇ ಶರಣಾಗಿ ಇಲ್ದಿದ್ರೆ ಕಾರ್ಯಾಚರಣೆ ಮಾಡ್ತೇವೆ- ಕಾಡಲ್ಲಿ ಅವಿತಿರುವ ನಕ್ಸಲರಿಗೆ ಪ್ರಣಬ್ ಮೊಹಂತಿ ಎಚ್ಚರಿಕೆ
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೂ ಲೋಕಾ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದು, ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿಗೂ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಕೃಷ್ಣವೇಣಿ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದರು. ಲೋಕಾಯುಕ್ತ ಎಸ್‌ಪಿ ನಟರಾಜ್ ನೇತೃತ್ವದಲ್ಲಿ ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ | ಮೈತ್ರಿ ಕೂಟಕ್ಕೆ ಮುನ್ನಡೆ, ಕಾಂಗ್ರೆಸ್‌ಗೆ ಬಿಗ್ ಶಾಕ್!
ಅಬಕಾರಿ ಎಸ್‌ಪಿ ಮೋಹನ್ ಅವರ ವಾಜರಹಳ್ಳಿಯ ವಿಲ್ಲಾದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಸತತ 4 ಗಂಟೆಗಳಿಂದ ತಲಾಷ್ ನಡೆಸುತ್ತಿದೆ. ಮೋಹನ್ ಮನೆ ಮೇಲೆ 15 ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಅಲ್ಲದೇ ಮೋಹನ್ ಸರ್ಕಾರಿ ವಾಹನದಲ್ಲಿದ್ದ ದಾಖಲಾತಿಗಳನ್ನು ಕೂಡಾ ಪರಿಶೀಲನೆ ಮಾಡಲಾಗುತ್ತಿದೆ. ಮೋಹನ್ ಪತ್ನಿಯನ್ನು ಅಧಿಕಾರಿಗಳು ಬ್ಯಾಂಕ್‌ಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: Uttar Pradesh| ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ – ಐವರು ಸಾವು, 15 ಮಂದಿಗೆ ಗಾಯ