ತುಮಕೂರು: ವೈದ್ಯರ (Doctor) ನಿರ್ಲಕ್ಷ್ಯದಿಂದ ಐದು ವರ್ಷದ ಬಾಲಕಿ ಸಾವನ್ನಪ್ಪಿರುವುದಾಗಿ ಪೋಷಕರು ಆರೋಪಿಸಿ ಆಕ್ರೋಶ ಹೊರಹಾಕಿದ ಘಟನೆ ತುಮಕೂರು (Tumakuru) ಜಿಲ್ಲೆ ಗುಬ್ಬಿ (Gubbi) ತಾಲೂಕಿನಲ್ಲಿ ನಡೆದಿದೆ.
ತನು (5) ಮೃತ ಬಾಲಕಿ. ವೆಂಕಟೇಗೌಡನ ಪಾಳ್ಯದ ನಿವಾಸಿ ಸತೀಶ್ ಹಾಗೂ ಶಿಲ್ಪಾ ದಂಪತಿ ಪುತ್ರಿ ತನುಗೆ ರಾತ್ರಿ ಇದ್ದಕ್ಕಿದ್ದಂತೆ ಜ್ವರ ಕಾಣಿಸಿಕೊಂಡಿದೆ. ಕೂಡಲೇ ಸಿ.ಎಸ್.ಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪಾಲಕರು ಕರೆದೊಯ್ದಿದ್ದ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ. ಸಕಾಲದಲ್ಲಿ ಚಿಕಿತ್ಸೆ ಲಭ್ಯವಾಗಿಲ್ಲ. ನರ್ಸ್ ಮಗುವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ ಹಿನ್ನೆಲೆ ಖಾಸಗಿ ವಾಹನದಲ್ಲಿ ಗುಬ್ಬಿಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗಮಧ್ಯೆ ಬಾಲಕಿ (Girl) ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಪ್ರತಿಭಾ ಕಾರಂಜಿ ಕಾರ್ಯಕ್ರಮ ವೇಳೆ ಪೆಟ್ರೋಲ್ ಬಳಸಿ ಅವಾಂತರ – ವಿದ್ಯಾರ್ಥಿಗೆ ಸುಟ್ಟ ಗಾಯ
ಸಿ.ಎಸ್.ಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇದ್ದಿದ್ದರೆ ನಮ್ಮ ಮಗು ಸಾವನ್ನಪ್ಪುತ್ತಿರಲಿಲ್ಲ. ಇದು 24×7 ಪ್ರಾಥಮಿಕ ಆರೋಗ್ಯ ಕೇಂದ್ರವಾಗಿದ್ದು, ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ನಮ್ಮ ಮಗು ಸಾವನ್ನಪ್ಪಿದೆ. ಸಕಾಲದಲ್ಲಿ ಚಿಕಿತ್ಸೆ ಸಿಕ್ಕಿದ್ದರೆ ಮೃತಪಡುತ್ತಿರಲಿಲ್ಲ. ವೈದ್ಯರ ನಿರ್ಲಕ್ಷ್ಯವೇ ಮಗು ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ- ಚರ್ಚ್ ಫಾದರ್ ವಿರುದ್ಧ ಎಫ್‍ಐಆರ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]