– ಆರೋಪಿ ಬಂಧನಕ್ಕೆ ವಿಳಂಬ ಆರೋಪ
ದಾವಣಗೆರೆ: ಪೋಕ್ಸೋ ಆರೋಪಿ ಸಂಬಂಧಿಗಳ ಕಿರುಕುಳಕ್ಕೆ ಬೇಸತ್ತು ದೂರುದಾರ ಆತ್ಮಹತ್ಯೆಗೆ ಶರಣಾದ ಘಟನೆ ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಳೆದ ಒಂದೂವರೆ ತಿಂಗಳ ಹಿಂದೆ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಆದರೆ, ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಳಂಬ ತೋರಿದ್ದರು ಎನ್ನಲಾಗಿದೆ. ಇದೇ ವೇಳೆ ಆರೋಪಿ ಯುವಕನ ಕಡೆಯವರಿಂದ ದೂರುದಾರರಿಗೆ ಸತತ ಕಿರುಕುಳ ನೀಡಲಾಗಿದೆ. ಇದರಿಂದ ತೀವ್ರ ಮನನೊಂದ ದೂರುದಾರ ತೋಟದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸ್ನೇಹಿತನ ಜೊತೆ ಲಾಡ್ಜ್‌ಗೆ ತೆರಳಿದ್ದ ಮಹಿಳೆಯ ರೇಪ್‌ಗೆ ಸುಪಾರಿ ಕೊಟ್ಟ ಪತ್ನಿ!
ಪೊಲೀಸರ ನಿರ್ಲಕ್ಷ್ಯ ಮತ್ತು ಆರೋಪಿಯ ಕಡೆಯವರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಮೃತರ ಸಂಬಂಧಿಕರು ಚನ್ನಗಿರಿ ಪೊಲೀಸ್ ಠಾಣೆಯ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು ಶವವನ್ನು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಮನೆಗೆ ನುಗ್ಗಿ ಮುಸುಕುಧಾರಿಯಿಂದ ಟೆಕ್ಕಿ ಮೇಲೆ ರೇಪ್

