ಮೈಸೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಪ್ರತಾಪ್ ಸಿಂಹ (Prathap Simha) ಸೇರಿದಂತೆ ಇತರರ ವಿರುದ್ಧ ಟಿ.ನರಸೀಪುರ (T Narasipura) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.
ಟಿ.ನರಸೀಪುರದಲ್ಲಿ ಗಣೇಶ ಕೂರಿಸುವ ವಿಚಾರಕ್ಕೆ ಇನ್ಸ್ಪೆಕ್ಟರ್ ಧಮ್ಕಿಗೆ ಸವಾಲಾಗಿ ನಡೆದ ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಹಿನ್ನೆಲೆ ಪ್ರತಾಪ್ ಸಿಂಹ ಮತ್ತು ಇತರರ ವಿರುದ್ಧ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 132, 191, 194, 196(1)(ಎ)(ಬಿ), 299, 353(1)(ಬಿ)(ಸಿ) ಹಾಗೂ ಸೆಕ್ಷನ್ 190ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: Asian Games 2026 | ಭಾರತದ ಪದಕ ಬೇಟೆ ಆರಂಭ – ಬೆಳ್ಳಿಗೆ ಶೂಟ್
ಸಾರ್ವಜನಿಕ ಸೇವಕರು ಮತ್ತು ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪ ಹಾಗೂ ಗುಂಪುಗಳು ಹಾಗೂ ಜಾತಿಗಳ ನಡುವೆ ದ್ವೇಷ ಉತ್ತೇಜನೆ ಧಾರ್ಮಿಕ ನಂಬಿಕೆಗಳಿಗೆ ಅವಮಾನ ಮತ್ತು ಪ್ರಚೋದನಕಾರಿ ಭಾಷಣಗಳ ಆರೋಪ, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ:

