ಚಾಮರಾಜನಗರ: ಮೂಲಭೂತ ಸೌಕರ್ಯ ಕೊರತೆ ಆರೋಪಿಸಿ ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ (Voting) ದೂರ ಉಳಿದಿದ್ದಾರೆ.
ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದು (Election Boycott), ಪಡಸಲನತ್ತ ಗ್ರಾಮದಲ್ಲಿ 85 ಮತದಾರರ ಪೈಕಿ ಇಬ್ಬರು ಮಾತ್ರ ಮತದಾನ ಮಾಡಿದ್ದಾರೆ. ಉಳಿದಂತೆ ಯಾವುದೇ ಮತದಾರರು ಇದುವರೆಗೂ ಮತಗಟ್ಟೆಯತ್ತ ಸುಳಿದಿಲ್ಲ. ಕನಿಷ್ಠ ಮೂಲಭೂತ ಸೌಕರ್ಯದಿಂದ ಗ್ರಾಮಸ್ಥರು ವಂಚಿತರಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ
Advertisement
Advertisement
ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣ ಮರಿಚೀಕೆಯಾಗಿದೆ ಎಂದು ಆರೋಪ ಹೊರಿಸಲಾಗಿದೆ. ಕೆಲ ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದರು. ಅಧಿಕಾರಿಗಳು ಮನವೊಲಿಸುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿ ಮತದಾನ ಮಾಡಲೇಬಾರದು ಎಂದು ಗ್ರಾಮಸ್ಥರು ದೃಢ ಸಂಕಲ್ಪ ಮಾಡಿದ್ದಾರೆ. ಇದನ್ನೂ ಓದಿ: Lok Sabha Elections 2024: ಒಂದೇ ಕುಟುಂಬದ 85 ಮಂದಿಯಿಂದ ಏಕಕಾಲದಲ್ಲಿ ಮತದಾನ!
Advertisement