– ನ್ಯಾಯ ಒದಗಿಸದಿದ್ದರೆ ದಯಾಮರಣ ನೀಡುವಂತೆ ಮನವಿ
ರಾಮನಗರ: ಶಾಸಕ ಇಕ್ಬಾಲ್ ಹುಸೇನ್ (Iqbal Hussain) ವಿರುದ್ಧ ಭೂಕಬಳಿಕೆ (Land Grabbing) ಆರೋಪ ವಿಚಾರ ಕುರಿತು ಕನಕಪುರ (Kanakapura) ತಾಲೂಕಿನ ಹೊಂಗಣಿದೊಡ್ಡಿ ಗ್ರಾಮಸ್ಥರು ಇಂದು ದಾಖಲೆ ಬಿಡುಗಡೆ ಮಾಡಿದ್ದಾರೆ.
1957ರಲ್ಲಿ ಭೂ ಮಾಲೀಕರು ಗ್ರಾಮಸ್ಥರಿಗೆ ಹಿಂದೆ ಕ್ರಯ ಮಾಡಿಕೊಟ್ಟ ದಾಖಲಾತಿ ಹಾಗೂ 19 ಜನ ಗೇಣಿದಾರರ ಗೇಣಿ ಅರ್ಜಿಯನ್ನ ಬಿಡುಗಡೆ ಮಾಡಿ ಸುದ್ದಿಗೋಷ್ಠಿ ನಡೆಸಿ ಗ್ರಾಮಸ್ಥರು ಮಾತನಾಡಿದರು. ಗ್ರಾಮದ 67 ಎಕರೆ ಜಮೀನನ್ನು ರಾಮನಗರ ಶಾಸಕರು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಇಡೀ ಗ್ರಾಮವೇ ಶಾಸಕರ ಹೆಸರಲ್ಲಿ ಇದೆ ಎಂಬುದನ್ನು ಸ್ವತಃ ಶಾಸಕರೇ ಒಪ್ಪಿಕೊಂಡಿದ್ದಾರೆ. ಈಗ ಗ್ರಾಮವನ್ನ ಮಾತ್ರ ಬಿಟ್ಟುಕೊಡುತ್ತೇನೆ ಎನ್ನುತ್ತಾರೆ. ಕೇವಲ ಗ್ರಾಮದ ಜಮೀನು ಮಾತ್ರವಲ್ಲ ನಮ್ಮ ಕೃಷಿ ಭೂಮಿಯನ್ನೂ ನಮಗೆ ಬಿಟ್ಟುಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾಲ್ವರು ಇಸ್ರೇಲ್ ಮಹಿಳಾ ಸೈನಿಕರನ್ನು ಬಿಡುಗಡೆ ಮಾಡಿದ ಹಮಾಸ್ ಉಗ್ರರು
19 ಗೇಣಿದಾರರ ಜಮೀನುಗಳನ್ನು ವಾಪಸ್ ನೀಡಿ. ಸ್ಥಳಕ್ಕೆ ಡಿಸಿ ಭೇಟಿ ನೀಡಿ ನಮ್ಮ ಜಾಗಕ್ಕೆ ಮಂಜೂರಾತಿ ಪತ್ರಗಳ ನೀಡಬೇಕು. ಕಳೆದ 60-70 ವರ್ಷದಿಂದ ನಾವು ಅಲ್ಲಿ ವ್ಯವಸಾಯ ಮಾಡ್ತಿದ್ದೇವೆ. ನಮ್ಮ ಜಮೀನುಗಳನ್ನ ನಮಗೆ ಉಳಿಸಿಕೊಡಿ. ಲೋಕಾಯುಕ್ತ ಅಧಿಕಾರಿಗಳು ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ನ್ಯಾಯ ಒದಗಿಸಲಿಲ್ಲ ಅಂದರೆ ದಯಾಮರಣ ನೀಡುವಂತೆ ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಡ್ಡಿ ಹಣಕ್ಕೆ ಮನಬಂದಂತೆ ಹಲ್ಲೆ – ಬೆತ್ತಲೆಗೊಳಿಸಿ ಚಿತ್ರಹಿಂಸೆ