– ದೂರು ದಾಖಲಾದ ಬಳಿಕ ಜೋಡಿಯನ್ನು ಪತ್ತೆಹಚ್ಚಿದ ಪೊಲೀಸರು
ಮಂಡ್ಯ: ಅಪ್ರಾಪ್ತ ಹಿಂದೂ ಬಾಲಕಿಯನ್ನು (Minor Girl) ಪ್ರೀತಿ (Love) ಹೆಸರಲ್ಲಿ ಪುಸಲಾಯಿಸಿ ಅನ್ಯಧರ್ಮೀಯ ಯುವಕ ಕರೆದೊಯ್ದ ಘಟನೆ ಮಂಡ್ಯ (Mandya) ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ (KR Pete) ನಡೆದಿದೆ.
15 ವರ್ಷದ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಲ್ಲಿ ಕರೆದೊಯ್ದಿದ್ದಾನೆ. ಪಟ್ಟಣದ 19 ವರ್ಷದ ಯುವಕ ಸೈಯದ್ ತಬ್ರೀಜ್ ವಿರುದ್ಧ ಲವ್ ಜಿಹಾದ್ ಆರೋಪಿಸಲಾಗಿದೆ. ಬಾಲಕಿ ಪೋಷಕರಿಂದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ನೀಡಲಾಗಿದೆ. ದೂರಿನ ಬಳಿಕ ಪಟ್ಟಣ ಪೊಲೀಸರು ಬಾಲಕಿ ಹಾಗೂ ಯುವಕನನ್ನು ಪತ್ತೆ ಹಚ್ಚಿ ಕರೆತಂದಿದ್ದಾರೆ. ಇದನ್ನೂ ಓದಿ: ʻಸ್ವಚ್ಛತೀರ್ಥ ಅಭಿಯಾನʼಕ್ಕೆ ರಾಜ್ಯ ನಾಯಕರು ಸಾಥ್ – ಹುಬ್ಬಳ್ಳಿಯಲ್ಲಿ ದೇವಸ್ಥಾನ ಸ್ವಚ್ಛಗೊಳಿಸಿದ ಪ್ರಹ್ಲಾದ್ ಜೋಶಿ
ಪ್ರಕರಣದ ಬಳಿಕ ಹಿಂದೂ ಸಂಘಟನೆಗಳಿಂದ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಪಟ್ಟಣದಲ್ಲೂ ಅನ್ಯಧರ್ಮೀಯರಿಂದ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿದೆ. ಇದನ್ನೂ ಓದಿ: ಕೋಚಿಮುಲ್ ನೇಮಕಾತಿ ಅಕ್ರಮ – ಶಾಸಕರ ಶಿಫಾರಸು ಪತ್ರ ನೀಡಿದ ಅಭ್ಯರ್ಥಿಗಳಿಗೆ ಇಡಿ ಶಾಕ್
ಬಾಲಕಿ ಕರೆದೊಯ್ದು ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದ ಹಿಂದೆ ಅನ್ಯ ಕೋಮಿನವರು ಲವ್ ಜಿಹಾದ್‌ಗೆ ಪ್ರಚೋದನೆ ನೀಡುತ್ತಿರುವುದಾಗಿ ಆರೋಪಿಸಿ ತನಿಖೆಗೆ ಆಗ್ರಹಿಸಲಾಗಿದೆ. ಇದನ್ನೂ ಓದಿ: ಉತ್ತರಾಯಣಕ್ಕೆ ಸೂರ್ಯ ಪಥ ಬದಲಾವಣೆ – ಕಾಶಿ ಚಂದ್ರಮೌಳೇಶ್ವರ ಸ್ವಾಮಿ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ